ಶುಕ್ರವಾರ, ಏಪ್ರಿಲ್ 23, 2021
27 °C

ರಾಜಸ್ಥಾನ ಅಪಘಾತ: 8 ಮಂದಿ ಸಾವು, ನಾಲ್ವರಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೈ‍ಪುರ: ರಾಜಸ್ಥಾನದ ಟೊಂಕ್‌ ಜಿಲ್ಲೆಯಲ್ಲಿ ಟ್ರಕ್‌ವೊಂದು ಜೀಪ್‌ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ ಎಂದು ಪೊಲೀಸರು ಬುಧವಾರ ತಿಳಿಸಿದರು.

ಈ ಅಪಘಾತವು ಮಂಗಳವಾರ ತಡರಾತ್ರಿ ಕಳೆದ ನಂತರ 2.15ಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಜೀಪ್‌ಗೆ ಟ್ರಕ್‌ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇದರಿಂದಾಗಿ 8 ಮಂದಿ ಸ್ಥಳದಲ್ಲಿ ಮೃತಪಟ್ಟಿದ್ದು, ಇನ್ನುಳಿದ ನಾಲ್ವರಿಗೆ ಗಾಯಾಗಳಾಗಿವೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟೊಂಕ್‌ ಸರ್ದಾರ್‌ ಪೊಲೀಸ್‌ ಠಾಣೆಯ ವರಿಷ್ಠಾಧಿಕಾರಿ ದಶರಥ್‌ ಸಿಂಗ್‌ ಅವರು ಮಾಹಿತಿ ನೀಡಿದರು.

‘ಸಂತ್ರಸ್ಥರು ಮಧ್ಯಪ್ರದೇಶದ ರಾಜ್‌ಗಡ್‌ ನಿವಾಸಿಗಳಾಗಿದ್ದು, ಅವರು ತಮ್ಮ ಮನೆಗೆ ವಾಪಾಸು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ’ ಎಂದು ಪೊಲೀಸರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು