ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪಾವಳಿ: ಪಟಾಕಿ ಮಾರಾಟ ನಿಷೇಧಿಸಲು ರಾಜಸ್ಥಾನ ಸರ್ಕಾರ ನಿರ್ಧಾರ

Last Updated 2 ನವೆಂಬರ್ 2020, 6:36 IST
ಅಕ್ಷರ ಗಾತ್ರ

ಜೈಪುರ: ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಈ ಬಾರಿ ಹಬ್ಬದ ಅವಧಿಯಲ್ಲಿ ಪಟಾಕಿ ಮಾರಾಟ ನಿಷೇಧಿಸಲು ರಾಜಸ್ಥಾನ ಸರ್ಕಾರ ನಿರ್ಧರಿಸಿದೆ.

ಈ ಸವಾಲಿನ ಸಮಯದಲ್ಲಿ ಜನರ ಜೀವ ಉಳಿಸುವುದು ಸರ್ಕಾರಕ್ಕೆ ಬಹು ಮುಖ್ಯವಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಶಾಲೆ ಮತ್ತು ಕಾಲೇಜುಗಳನ್ನು ನವೆಂಬರ್ 16ರ ವರೆಗೂ ತೆರೆಯದೇ ಇರಲು ನಿರ್ಧರಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ಕೊರೊನಾ ವೈರಸ್ ಬಿಕ್ಕಟ್ಟು, ‘ನೊ ಮಾಸ್ಕ್–ನೊ ಎಂಟ್ರಿ’ ಮತ್ತು ‘ವಾರ್ ಫಾರ್ ದಿ ಪ್ಯೂರ್’ ಅಭಿಯಾನಗಳ ಕುರಿತು ಅವರು ಪರಾಮರ್ಶೆ ನಡೆಸಿದ್ದಾರೆ. ‘ಅನ್‌ಲಾಕ್–6’ರ ಮಾರ್ಗಸೂಚಿ ಬಗ್ಗೆಯೂ ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಪಟಾಕಿ ಮಾರಾಟ ಮತ್ತು ಫಿಟ್‌ನೆಸ್ ಪ್ರಮಾಣಪತ್ರವಿಲ್ಲದೆ ಸಂಚರಿಸುವ ವಾಹನಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಇಂಥ ಸಂದರ್ಭದಲ್ಲಿ ಜನರು ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸಬಾರದು ಎಂದು ಗೆಹ್ಲೋಟ್ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT