ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನದಲ್ಲಿ ಕಾಂಗ್ರೆಸ್​ ಶಾಸಕರ ರಾಜೀನಾಮೆ: ಸ್ಪೀಕರ್‌ಗೆ ಹೈಕೋರ್ಟ್‌ ನೋಟಿಸ್‌

Last Updated 7 ಡಿಸೆಂಬರ್ 2022, 2:58 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ 91 ಶಾಸಕರ ರಾಜೀನಾಮೆ ಕುರಿತು ನಿರ್ಧಾರ ತೆಗೆದುಕೊಳ್ಳದ ಸಂಬಂಧಸ್ಪೀಕರ್ ಅವರಿಗೆರಾಜಸ್ಥಾನ ಹೈಕೋರ್ಟ್ ನೋಟಿಸ್‌ ಜಾರಿ ಮಾಡಿದೆ.

ಬಿಜೆಪಿ ನಾಯಕ ರಾಜೇಂದ್ರ ರಾಥೋಡ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ(ಪಿಐಎಲ್) ವಿಚಾರಣೆ ನಡೆಸಿದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅವರು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ91ಕ್ಕೂ ಹೆಚ್ಚು ಶಾಸಕರು ನೀವು ರಾಜಸ್ಥಾನ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆಹೋದರೆ ನಾವು ರಾಜೀನಾಮೆ ನೀಡುತ್ತೇವೆ ಎಂದು ಹೇಳಿ ಸ್ಪೀಕರ್‌ ಅವರಿಗೆ ರಾಜೀನಾಮೆ ಪತ್ರಗಳನ್ನುಸಲ್ಲಿಸಿದ್ದರು ಎಂದುರಾಜೇಂದ್ರ ರಾಥೋಡ್ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್ 25ರಂದು ಕಾಂಗ್ರೆಸ್‌ಶಾಸಕರು ವಿಧಾನ ಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದರು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗೂ ಶಾಸಕರು ಸ್ಪೀಕರ್‌ಗೆ ರಾಜೀನಾಮೆ ಸ್ವೀಕರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು ಎಂದು ಪಿಐಎಲ್‌ ಅರ್ಜಿಯಲ್ಲಿ ಹೇಳಲಾಗಿದೆ.

ವಿಧಾನಸಭೆಯ ನಿಯಮ 173ರ ಅಡಿಯಲ್ಲಿ ಸ್ಪೀಕರ್ ರಾಜೀನಾಮೆ ಅಂಗೀಕರಿಸದೇ ಬೇರೆ ದಾರಿಯಿಲ್ಲ, ಆದರೆ ಅವರು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದುರಾಜೇಂದ್ರ ರಾಥೋಡ್ ಅರ್ಜಿಯಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT