ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿಗೆ ಸಂತಾನ ಭಾಗ್ಯ ಕರುಣಿಸಲು ಕೈದಿಗೆ 15 ದಿನ ಪೆರೋಲ್ ಮಂಜೂರು

Last Updated 23 ಏಪ್ರಿಲ್ 2022, 7:29 IST
ಅಕ್ಷರ ಗಾತ್ರ

ಜೋಧಪುರ: ಜೈಲುವಾಸದಲ್ಲಿರುವ ಕೈದಿಗಳು ಕೆಲವು ಅನಿವಾರ್ಯ ಕಾರಣಗಳಿಂದಾಗಿ ಪೆರೋಲ್‌ ಪಡೆಯಲು ಕೋರ್ಟ್‌ ಮೊರೆ ಹೋಗುವುದು ಸಹಜ. ಆದರೆ, ಇಲ್ಲೊಬ್ಬ ಕೈದಿಗೆ ಹೆಂಡತಿಯನ್ನು ಗರ್ಭಿಣಿ ಮಾಡಲು ರಾಜಸ್ಥಾನ್‌ ಹೈಕೋರ್ಟ್‌ 15 ದಿನ ಪೆರೋಲ್‌ ಮಂಜೂರು ಮಾಡಿದೆ.

ಅಪರೂಪದ ಘಟನೆಯೊಂದರಲ್ಲಿ ಕೈದಿಗೆ ತನ್ನ ಹೆಂಡತಿಯನ್ನು ಗರ್ಭಿಣಿ ಮಾಡಲು 15 ದಿನಗಳ ಪೆರೋಲ್ ನೀಡಿರಾಜಸ್ಥಾನ ಹೈಕೋರ್ಟ್ ಇತ್ತೀಚೆಗೆಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ಫರ್ಜಂದ್ ಅಲಿ ಅವರ ದ್ವಿಸದಸ್ಯ ಪೀಠವು 34 ವರ್ಷದ ನಂದ್‌ಲಾಲ್ (ಕೈದಿ)ಅವರ ಪತ್ನಿ ರೇಖಾ ಅವರ ‘ಸಂತಾನದ ಹಕ್ಕು’ ಆಧಾರದ ಮೇಲೆ ತನ್ನ ಪತಿಯನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದೆ.

ಅಪರಾಧಿಯ ಜೈಲುವಾಸ ಆತನ ಹೆಂಡತಿಯ ಲೈಂಗಿಕ ಅಪೇಕ್ಷೆಗಳು ಮತ್ತು ಭಾವನಾತ್ಮಕ ಅಗತ್ಯಗಳ ಮೇಲೆ ಪರಿಣಾಮ ಬೀರಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಋಗ್ವೇದ ಸೇರಿದಂತೆ ಹಿಂದೂ ಧರ್ಮಗ್ರಂಥಗಳನ್ನೂ ನ್ಯಾಯಾಲಯ ಉಲ್ಲೇಖಿಸಿದೆ. ಕೈದಿಗಳಿಗೆ 15 ದಿನಗಳ ಪೆರೋಲ್ ನೀಡಲು ಅವರು ಜುದಾಯಿಸಂ, ಕ್ರಿಶ್ಚಿಯನ್ ಧರ್ಮ ಮತ್ತು ಇಸ್ಲಾಂ ಧರ್ಮದ ಸಿದ್ಧಾಂತಗಳನ್ನು ಪರಿಗಣಿಸಲಾಗಿದೆ. 16 ಸಂಸ್ಕಾರಗಳಲ್ಲಿ ಮಗುವನ್ನು ಗರ್ಭಧರಿಸುವುದು ಮಹಿಳೆಯ ಮೊದಲ ಮತ್ತು ಅಗತ್ಯ ಹಕ್ಕು ಎಂದು ನ್ಯಾಯಾಲಯ ತೀರ್ಪಿನಲ್ಲಿ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT