ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನದ ಜೋಧಪುರದಲ್ಲಿ ಹಿಂಸಾಚಾರ: 97 ಜನರ ಬಂಧನ, ಇಂಟರ್ನೆಟ್‌ ಸೇವೆ ಸ್ಥಗಿತ

ಅಕ್ಷರ ಗಾತ್ರ

ಜೋಧಪುರ: ರಾಜಸ್ಥಾನದ ಜೋಧಪುರದಲ್ಲಿ ಮಂಗಳವಾರ ಸಂಭವಿಸಿದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈ ವರೆಗೆ 97 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಹವಾ ಸಿಂಗ್‌ ಗುಮಾರಿಯಾ ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳನ್ನು ಹರಡದಂತೆ ತಡೆಯಲು ಜೋಧಪುರದಲ್ಲಿ ಇಂಟರ್ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಅವರ ತವರು ಜಿಲ್ಲೆಯಾದ ಜೋಧಪುರದಲ್ಲಿ ಕೋಮು ಘರ್ಷಣೆ ನಡೆದಿರುವುದು ವಿರೋಧ ಪಕ್ಷಗಳ ಆಕ್ರೋಶಕ್ಕೆ ಗುರಿಯಾಗಿದೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ರಾಜಸ್ಥಾನ ಬಿಜೆಪಿ ಘಟಕದ ಅಧ್ಯಕ್ಷ, ‘ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು. ಈ ನಿಟ್ಟಿನಲ್ಲಿ ರಾಜ್ಯಪಾಲರು ಸರ್ಕಾರಕ್ಕೆ ಸೂಚನೆಗಳನ್ನು ನೀಡಬೇಕು’ ಎಂದು ಮನವಿ ಮಾಡಿದ್ದಾರೆ.

ಈದ್ ಸಂದರ್ಭದಲ್ಲಿ ಧಾರ್ಮಿಕ ಧ್ವಜ ಅಳವಡಿಸುವ ವಿಚಾರದಲ್ಲಿ ಜಾಲೋರಿ ಗೇಟ್‌ ಸಮೀಪ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಕಲ್ಲು ತೂರಾಟ ನಡೆಸಲಾಗಿದ್ದು, ಪೊಲೀಸರು ಸೇರಿದಂತೆ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT