ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ: 8 ನಗರಗಳಲ್ಲಿ ರಾತ್ರಿಕರ್ಫ್ಯೂ, ರಾಜ್ಯಕ್ಕೆ ಬರುವವರಿಗೆ ನೆಗೆಟಿವ್ ವರದಿ

Last Updated 21 ಮಾರ್ಚ್ 2021, 15:42 IST
ಅಕ್ಷರ ಗಾತ್ರ

ಜೈಪುರ: ಏರಿಕೆಯಾಗುತ್ತಲೇ ಇರುವ ಕೊರೊನಾ ವೈರಸ್ ಪ್ರಕರಣಗಳ ಮಧ್ಯೆ, ಸೋಮವಾರದಿಂದ ಎಂಟು ನಗರಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ರಾಜಸ್ಥಾನ ಸರ್ಕಾರ ನಿರ್ಧರಿಸಿದೆ ಮತ್ತು ರಾಜ್ಯಕ್ಕೆ ಭೇಟಿ ನೀಡುವ ಜನರಿಗೆ ಕೋವಿಡ್-19 ನೆಗೆಟಿವ್ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸಿದ್ದಾರೆ.

ರಾತ್ರಿ 11 ರಿಂದ ಬೆಳಿಗ್ಗೆ 5ರವರೆಗೆ ಅಜ್ಮೀರ್, ಭಿಲ್ವಾರಾ, ಜೈಪುರ, ಜೋಧ್‌ಪುರ, ಕೋಟಾ, ಉದಯಪುರ, ಸಾಗ್ವಾಡಾ (ಡುಂಗಾರ್‌ಪುರ) ಮತ್ತು ಕುಶಲ್‌ಗಡ (ಬನ್ಸ್ವಾರ) ದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಇತರ ರಾಜ್ಯಗಳಿಂದ ರಾಜಸ್ಥಾನಕ್ಕೆ ಬರುವ ಪ್ರಯಾಣಿಕರು ಮಾರ್ಚ್ 25 ರಿಂದ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿಗಳನ್ನು (72 ಗಂಟೆಗಳಿಗಿಂತ ಹಳೆಯದಲ್ಲದ) ತರಬೇಕು ಎಂದು ನಿರ್ಧರಿಸಲಾಗಿದೆ. ಪ್ರಯಾಣಿಕರ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿ ನೆಗೆಟಿವ್ ಆಗಿಲ್ಲದಿದ್ದರೆ, ಅವರು 15 ದಿನಗಳವರೆಗೆ ಕ್ವಾರಂಟೈನ್‌ನಲ್ಲಿರಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗರ ಸ್ಥಳೀಯ ಸಂಸ್ಥೆಗಳ ಮಾರುಕಟ್ಟೆಗಳು ರಾತ್ರಿ 10ರ ವೇಳೆಗೆ ಮುಚ್ಚಲು ನಿರ್ಧರಿಸಲಾಗಿದೆ. ರಾಜಸ್ಥಾನದಲ್ಲಿ ಶನಿವಾರ 445 ಹೊಸ ಕೊರೊನಾವೈರಸ್ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,24,948ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ವರದಿಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT