ಶನಿವಾರ, ಸೆಪ್ಟೆಂಬರ್ 18, 2021
24 °C

ರಾಜಸ್ಥಾನ: 22 ಜಿಲ್ಲೆಗಳಲ್ಲಿ ದಾಖಲಾಗಿಲ್ಲ ಹೊಸ ಕೋವಿಡ್‌ ಪ್ರಕರಣ

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ: ರಾಜಸ್ಥಾನದ 22 ಜಿಲ್ಲೆಗಳಲ್ಲಿ ಬುಧವಾರ ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿಲ್ಲ. ಜತೆಗೆ, ಕೋವಿಡ್‌ ಕಾರಣಗಳಿಂದ ಸಾವಿಗೀಡಾಗಿರುವುದೂ ವರದಿಯಾಗಿಲ್ಲ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜಸ್ಥಾನದಲ್ಲಿ ಇಂದು 30 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,53,605 ಕ್ಕೆ ಏರಿಕೆಯಾಗಿದೆ. ಈ ಪೈಕಿ 8,953 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇಂದು ಜೈಪುರದಲ್ಲಿ 10, ಉದಯ್‌ಪುರದಲ್ಲಿ 9 ಹೊಸ ಪ್ರಕರಣಗಳು ವರದಿಯಾಗಿವೆ.

ಇದುವರೆಗೆ 9,44,384 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯಸ್ಥಾನದಲ್ಲಿ 268 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ... ಸಿಎಂ ಆಗಿ ಬೊಮ್ಮಾಯಿ ಅಧಿಕಾರ: ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳ ಅಬ್ಬರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು