ಮಂಗಳವಾರ, ಆಗಸ್ಟ್ 9, 2022
23 °C

ಉದಯಪುರ: ತಂದೆಯ ಹತ್ಯೆ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಿ– ಟೈಲರ್‌ ಪುತ್ರನ ಆಗ್ರಹ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್‌ ಕನ್ಹಯ್ಯ ಲಾಲ್ ಹತ್ಯೆಗೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಪ್ರಕಟಿಸಿದ್ದಕ್ಕಾಗಿ (ಮಂಗಳವಾರ) ಟೈಲರ್‌ ಕನ್ಹಯ್ಯ ಲಾಲ್ ಅವರ ಶಿರಚ್ಛೇದ ಮಾಡಲಾಗಿತ್ತು.

ಕನ್ಹಯ್ಯ ಲಾಲ್ ಅಂತ್ಯಕ್ರಿಯೆ ನೇರವೇರಿಸಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರ ಪುತ್ರ, ‘ತಂದೆಯನ್ನು ಹತ್ಯೆ ಮಾಡಿರುವ ಕೊಲೆಗಾರರ ಎನ್‌ಕೌಂಟರ್‌ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ. 

ಈ ಕುರಿತು ಟ್ವೀಟ್‌ ಮಾಡಿರುವ ಸುದ್ದಿಸಂಸ್ಥೆ ‘ಎಎನ್‌ಐ’, ‘ತಂದೆಯನ್ನು ಹತ್ಯೆ ಮಾಡಿದವರ ಎನ್‌ಕೌಂಟರ್ ಆಗಬೇಕು, ಇಲ್ಲವೇ ಅವರನ್ನು ಗಲ್ಲಿಗೇರಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಅವರಲ್ಲಿ ಭಯವನ್ನು ಹುಟ್ಟುಹಾಕಲು ಈ ರೀತಿಯ ಶಿಕ್ಷೆ ಅಗತ್ಯವಿದೆ’ ಎಂದು ತಿಳಿಸಿದ್ದಾರೆ. 

ಉದಯಪುರದ ಮಾಲ್ದಾಸ್ ಸ್ಟ್ರೀಟ್ ಪ್ರದೇಶದಲ್ಲಿ ಇಬ್ಬರು ದುಷ್ಕರ್ಮಿಗಳು ಟೈಲರ್‌ ಶಿರಚ್ಛೇದ ಮಾಡಿದ್ದರು. ಕೃತ್ಯದ ಬಳಿಕ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.

ಇವನ್ನೂ ಓದಿ: 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು