ಭಾನುವಾರ, ಆಗಸ್ಟ್ 14, 2022
20 °C

ಉದಯಪುರದ ಟೇಲರ್‌ ಕುಟುಂಬಕ್ಕೆ ₹50 ಲಕ್ಷ ಪರಿಹಾರ

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ/ಉದಯಪುರ: ದುಷ್ಕರ್ಮಿಗಳಿಂದ ಕೊಲೆಯಾದ ಉದಯಪುರದ ಟೇಲರ್‌ ಕನ್ಹಯ್ಯ ಲಾಲ್ ಅವರ ಕುಟುಂಬದವರನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಗುರುವಾರ ಭೇಟಿ ಮಾಡಿ ಸ್ವಾಂತನ ಹೇಳಿದ್ದಾರೆ. ಸರ್ಕಾರದ ವತಿಯಿಂದ ಸಂತ್ರಸ್ತ ಕುಟುಂಬಕ್ಕೆ ₹50 ಲಕ್ಷ ಪರಿಹಾರವನ್ನು ಅವರು ಘೋಷಿಸಿದ್ದಾರೆ.

ಉದಯಪುರದ ಸೆಕ್ಟರ್‌ 14ರಲ್ಲಿ ಇರುವ, ಕನ್ಹಯ್ಯ ಅವರ ಮನೆಗೆ ಮುಖ್ಯಮಂತ್ರಿಯ ಜತೆಗೆ, ಕಂದಾಯ ಸಚಿವ, ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾ ನಿರ್ದೇಶಕರು ಭೇಟಿ ನೀಡಿದ್ದರು. ಕುಟುಂಬದ ಎಲ್ಲಾ ಸದಸ್ಯರ ಜತೆಗೆ ಮಾತನಾಡಿದ ಗೆಹಲೋತ್, ಅಗತ್ಯ ನೆರವಿನ ಭರವಸೆ ನೀಡಿದ್ದಾರೆ.

‘ಉದ್ಯೋಗದ ಭರವಸೆ’: ‘ಮುಖ್ಯಮಂತ್ರಿ ನಮಗೆ ಧೈರ್ಯ ಹೇಳಿದ್ದಾರೆ. ಸರ್ಕಾರಿ ಉದ್ಯೋಗದ ಭರವಸೆ ನೀಡಿದ್ದಾರೆ’ ಎಂದು ಮೃತ ಕನ್ಹಯ್ಯ ಅವರ ಮಗ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು