ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಟಿಎಂಸಿಯ ಬಂಡಾಯ ನಾಯಕರು

Last Updated 30 ಜನವರಿ 2021, 16:37 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಸಮ್ಮುಖದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಬಂಡಾಯ ನಾಯಕರು ಶನಿವಾರದಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸೇರ್ಪಡೆಗೊಂಡರು.

ಪಶ್ಚಿಮ ಬಂಗಾಳದ ಮಾಜಿ ಸಚಿವ ರಾಜೀವ್ ಬ್ಯಾನರ್ಜಿ, ಟಿಎಂಸಿಯಿಂದ ಉಚ್ಫಾಟನೆಯಾಗಿರುವ ಶಾಸಕಿ ವೈಶಾಲಿ ದಾಲ್ಮಿಯಾ, ಹೂಗ್ಲಿ ಜಿಲ್ಲೆಯ ಶಾಸಕ ಪ್ರಬೀರ್ ಘೋಶಾಲ್, ಹೌರಾದ ಮಾಜಿ ಮೇಯರ್ ರತಿನ್ ಚಕ್ರವರ್ತಿ, ಮಾಜಿ ಶಾಸಕ ಪಾರ್ಥ ಸಾರಥಿ ಚಟರ್ಜಿ ಹಾಗೂ ನಟ ರುದ್ರಾನಿಲ್ ಘೋಷ್ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.

ಶುಕ್ರವಾರ ದೆಹಲಿಯ ಇಸ್ರೇಲ್ ರಾಯಭಾರ ಕಚೇರಿಯ ಸಮೀಪದಲ್ಲಿ ಸ್ಫೋಟ ನಡೆದಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರುಎರಡು ದಿನಗಳ ಪಶ್ಚಿಮ ಬಂಗಾಳದ ಪ್ರವಾಸವನ್ನು ರದ್ದುಗೊಳಿಸಿದ್ದರು. ಅಲ್ಲದೆ ಶನಿವಾರದಂದೇ ತೃಣಮೂಲ ಕಾಂಗ್ರೆಸ್‌ನ ಬಂಡಾಯ ನಾಯಕರನ್ನು ವಿಶೇಷ ವಿಮಾನದ ಮೂಲಕ ದೆಹಲಿಗೆಬರಮಾಡಿಕೊಂಡಿದ್ದರು.

ಸಭೆಯ ಬಳಿಕ ಪ್ರತಿಕ್ರಿಯಿಸಿರುವ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ, ಅವರೆಲ್ಲರೂ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದರು.

ಏಪ್ರಿಲ್-ಮೇ ತಿಂಗಳಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಡೆಲಿರುವುದರಿಂದ ಟಿಎಂಸಿ ಪಕ್ಷದ ಪ್ರಮುಖ ನಾಯಕರ ಪಕ್ಷಾಂತರವು ರಾಜಕೀಯ ವಲಯದಲ್ಲಿ ಹೆಚ್ಚಿನ ಕುತೂಹಲ ಕೆರಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT