ರಾಜಕೀಯ ಪಕ್ಷಕ್ಕೆ ಜನವರಿಯಲ್ಲಿ ಚಾಲನೆ: ರಜನಿಕಾಂತ್

ಚೆನ್ನೈ: 2021ರ ಜನವರಿಯಲ್ಲಿ ತಮ್ಮ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಸೂಪರ್‌ಸ್ಟಾರ್ ರಜನಿಕಾಂತ್ ಅವರು ತಿಳಿಸಿದ್ದಾರೆ.
2021ರಲ್ಲಿ ನಡೆಯಲಿರುವ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸಿ, ಜನರ ಭಾರಿ ಬೆಂಬಲದೊಂದಿಗೆ ಗೆಲುವನ್ನು ಸಾಧಿಸಲಿದೆ ಎಂದು ರಜನಿಕಾಂತ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
2021 ಏಪ್ರಿಲ್– ಮೇ ತಿಂಗಳಲ್ಲಿ ತಮಿಳುನಾಡು ವಿಧಾನಭೆಗಾಗಿ ಚುನಾವಣೆ ನಡೆಯಲಿದೆ.
‘ಮುಂದಿನ ವಿಧಾನಸಭಾ ಚುನಾವಣೆ ವೇಳೆ ತಮ್ಮ ಪಕ್ಷವು ಖಂಡಿತವಾಗಿಯೂ ಪದಾರ್ಪಣೆಗೊಳ್ಳಲಿದೆ. ಪಕ್ಷದ ಸ್ಥಾಪನೆ ಸಂಬಂಧಿಸಿದ ವಿಷಯಗಳ ಬಗ್ಗೆ ಡಿಸೆಂಬರ್ 31 ರಂದು ಪ್ರಕಟಿಸಲಾಗುವುದು’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ஜனவரியில் கட்சித் துவக்கம்,
டிசம்பர் 31ல் தேதி அறிவிப்பு. #மாத்துவோம்_எல்லாத்தையும்_மாத்துவோம்#இப்போ_இல்லேன்னா_எப்பவும்_இல்ல 🤘🏻 pic.twitter.com/9tqdnIJEml— Rajinikanth (@rajinikanth) December 3, 2020
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.