ನವದೆಹಲಿ: ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಅವರ 31ನೇ ಪುಣ್ಯಸ್ಮರಣೆ ದಿನವಾದ ಇಂದು (ಮೇ 21) ಪ್ರಧಾನಿ ನರೇಂದ್ರ ಮೋದಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

‘ನಮ್ಮ ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ, ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ರಾಜೀವ್ ಗಾಂಧಿ ಅವರನ್ನು ಸ್ಮರಿಸಿದ್ದಾರೆ.

ಇಂದಿರಾ ಗಾಂಧಿ ಹತ್ಯೆ ಬಳಿಕ ದೇಶದ ಪ್ರಧಾನಿಯಾಗಿ ರಾಜೀವ್ ಗಾಂಧಿ ಅಧಿಕಾರ ವಹಿಸಿಕೊಂಡರು. 1984 ರಿಂದ 1989 ರವರೆಗೆ ಪ್ರಧಾನಿಯಾಗಿದ್ದರು. ಅತ್ಯಂತ ಕಿರಿಯ ವಯಸ್ಸಿಗೆ ಪ್ರಧಾನಿಯಾಗಿದ್ದರು. 1991ರ ಮೇ 21ರಂದು ರಾಜೀವ್ ಗಾಂಧಿ ಹತ್ಯೆಗೀಡಾದರು.

ಅವರ ಹತ್ಯೆ ಪ್ರಕರಣದ ಅಪರಾಧಿ ಎ.ಜಿ.ಪೇರರಿವಾಳನ್ ಅವರನ್ನು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬುಧವಾರ ಬಿಡುಗಡೆ ಮಾಡಲಾಗಿದೆ. ಪ್ರಕರಣದ 7 ಮಂದಿ ಅಪರಾಧಿಗಳಲ್ಲಿ ಪೇರರಿವಾಳನ್ ಒಬ್ಬರಾಗಿದ್ದು, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.