ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅಧಿಕಾರ ಸ್ವೀಕಾರ

Last Updated 15 ಮೇ 2022, 11:17 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಅವರು 25ನೇ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಭಾನುವಾರ ಅಧಿಕಾರ ವಹಿಸಿಕೊಂಡರು.

ರಾಜೀವ್ ಕುಮಾರ್ ಅವರು 2020ರ ಸೆ. 1ರಿಂದ ಚುನಾವಣಾ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಹಣಕಾಸು ಸೇವೆಗಳ ಕಾರ್ಯದರ್ಶಿ ಮತ್ತು ಹಣಕಾಸು ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.

ಜುಲೈ ಮತ್ತು ಆಗಸ್ಟ್‌ನಲ್ಲಿ ನಡೆಯಲಿರುವ ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿ ಸ್ಥಾನಗಳ ಚುನಾವಣೆ ಸೇರಿದಂತೆ 2024ರ ಲೋಕಸಭಾ ಚುನಾವಣೆ ಮತ್ತು ಹಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳು ರಾಜೀವ್‌ ಕುಮಾರ್ ಅವರ ಮೇಲ್ವಿಚಾರಣೆಯಲ್ಲಿ ನಡೆಯಲಿವೆ. ರಾಜೀವ್ ಅವರ ಅಧಿಕಾರಾವಧಿ 2025ರ ಫೆಬ್ರುವರಿವರೆಗೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT