ಭಾನುವಾರ, ನವೆಂಬರ್ 27, 2022
27 °C

ಕೆಟ್ಟ‌ ಶಕ್ತಿಗಳಿಗೆ ಪ್ರತ್ಯುತ್ತರ ನೀಡಲು ಸೇನೆ ಸಮರ್ಥ: ರಾಜನಾಥ್ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೆಟ್ಟ ಉದ್ದೇಶಗಳಿಂದ ದೇಶವನ್ನು ನೋಡುವ ಯಾವುದೇ ಶಕ್ತಿ ಮತ್ತು ಚೀನಾದೊಂದಿಗೆ ಈಗ ವ್ಯವಹರಿಸುವಾಗಲೂ ಭಾರತೀಯ ಸೇನೆಗೆ ತಕ್ಕ ಪ್ರತ್ಯುತ್ತರ ನೀಡುವ ಸಾಮರ್ಥ್ಯವಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರ ಉಪಸ್ಥಿತಿಯಲ್ಲಿ ಶನಿವಾರ ಇಲ್ಲಿ ದೀನ್ ದಯಾಳ್ ಉಪಾಧ್ಯಾಯ ಕುರಿತ ಐದು ಸಂಪುಟ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1964ರಲ್ಲಿ ಚೀನಾ ಮೊದಲ ಪರಮಾಣು ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ದೀನ್ ದಯಾಳ್ ಉಪಾಧ್ಯಾಯ ಅವರು ಭಾರತ ಪರಮಾಣು ಪರೀಕ್ಷೆ ನಡೆಸುವುದರ ಪರವಾಗಿ ಮಾತನಾಡಿದ ಮೊದಲ ವ್ಯಕ್ತಿಯಾಗಿದ್ದರು ಎಂದರು.

1998ರಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದಲ್ಲಿ ರಾಜಸ್ಥಾನದಲ್ಲಿ ಭಾರತ ತನ್ನ ಮೊದಲ ಪರಮಾಣು ಪರೀಕ್ಷೆ  ನಡೆಸಿದಾಗ, ಯಾವುದೇ ದೇಶದ ವಿರುದ್ಧ ಅಸ್ತ್ರ ಬಳಸುವುದು ಅಲ್ಲ. ಆದರೆ ನಿರೋಧಕವನ್ನು ನಿರ್ವಹಿಸುವುದು ಇದರ ಉದ್ದೇಶವಾಗಿದೆ ಎಂದು ಅವರು ಹೇಳಿದ್ದರು ಎಂದು ನೆನಪಿಸಿದರು.

ದೇಶದ ಅಗತ್ಯಕ್ಕೆ ಬೇಕಾದ ವಸ್ತುಗಳನ್ನು ತಯಾರಿಸುವುದು ಮಾತ್ರವಲ್ಲದೆ, ಇತರೆ ದೇಶಗಳಿಗೆ ರಕ್ಷಣಾ ವಸ್ತುಗಳನ್ನು ರಫ್ತು ಮಾಡುವುದು ಗುರಿಯಾಗಿದೆ ಎಂದು ಸಿಂಗ್ ತಿಳಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು