ಶನಿವಾರ, ಸೆಪ್ಟೆಂಬರ್ 26, 2020
27 °C
ಮಾಸ್ಕೊದಲ್ಲಿ ಎಸ್‌ಒಸಿ ರಕ್ಷಣಾ ಸಚಿವರ ಸಭೆ

ಇಂದು ಸಂಜೆ ಭಾರತ–ಚೀನಾ ರಕ್ಷಣಾ ಸಚಿವರ ನಡುವೆ ಮಾತುಕತೆ ಸಾಧ್ಯತೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪೂರ್ವ ಲಡಾಖ್‌ನಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ನಡುವೆ ಮಾಸ್ಕೊದಲ್ಲಿ ಇಂದು (ಶುಕ್ರವಾರ) ಸಂಜೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಚೀನಾದ ರಕ್ಷಣಾ ಸಚಿವ ವೀ ಫೆಂಗೆ ಅವರ ನಡುವೆ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ರಕ್ಷಣಾ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಉಭಯ ದೇಶಗಳ ರಕ್ಷಣಾ ಸಚಿವರು ಈಗಾಗಲೇ ಮಾಸ್ಕೊ ತಲುಪಿದ್ದಾರೆ. ಭಾರತದ ರಕ್ಷಣಾ ಸಚಿವರೊಂದಿಗೆ ಮಾತುಕತೆ ನಡೆಸಬೇಕೆಂದು ಚೀನಾದ ರಕ್ಷಣಾ ಸಚಿವರು ಮನವಿ ಮಾಡಿದ್ದಾರೆಂದು ಮೂಲಗಳು ತಿಳಿಸಿವೆ. 

ಮೇ ತಿಂಗಳ ಆರಂಭದಲ್ಲಿ ಪೂರ್ವ ಲಡಾಖ್‌ನಲ್ಲಿ ಗಡಿರೇಖೆ ಉಲ್ಬಣಗೊಂಡ ಉದ್ವಿಗ್ನ ಸ್ಥಿತಿ ನಂತರ ಇದು ಉಭಯ ದೇಶಗಳ ನಡುವಿನ ಮೊದಲ ಉನ್ನತ ಮಟ್ಟದ ಸಭೆಯಾಗಿದೆ. ಇದಕ್ಕೂ ಮುನ್ನ, ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ ಉಂಟಾದ ಬೆಳವಣಿಗೆಗಳ ಕುರಿತು ಚರ್ಚಿಸಲು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಸತತವಾಗಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು