ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಧರ ಜತೆ ದಸರಾ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಲ್‌ಎಸಿಗೆ ಭೇಟಿ

Last Updated 25 ಅಕ್ಟೋಬರ್ 2020, 2:02 IST
ಅಕ್ಷರ ಗಾತ್ರ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಅವರು ಸಿಕ್ಕಿಂ ಸೆಕ್ಟರ್‌ನ ನೈಜ ನಿಯಂತ್ರಣ ರೇಖೆ (ಎಲ್‌ಎಸಿ) ಪ್ರದೇಶಕ್ಕೆ ಭೇಟಿ ನೀಡಿ ಸೇನೆಯ ಯುದ್ಧಸನ್ನದ್ಧತೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಾರ್ಜೆಲಿಂಗ್‌ನ ಸುಕ್ನಾದಲ್ಲಿರುವ ‘ತ್ರಿಶಕ್ತಿ’ ಎಂದೇ ಪ್ರಸಿದ್ಧವಾಗಿರುವ ಪ್ರಮುಖ ಸೇನಾ ನೆಲೆಗೆ ಸಚಿವರು ಶನಿವಾರ ಸಂಜೆ ಭೇಟಿ ನೀಡಿದ್ದಾರೆ. ಯೋಧರ ಜತೆ ದಸರಾ ಹಬ್ಬ ಆಚರಣೆ ಹಾಗೂ ಚೀನಾ ಜತೆಗಿನ ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ಸೇನಾ ಸನ್ನದ್ಧತೆಯ ಬಗ್ಗೆ ಪರಿಶೀಲನೆ ನಡೆಸುವ ಸಲುವಾಗಿ ಸಿಂಗ್ ಎರಡು ದಿನಗಳ ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂ ಭೇಟಿ ಹಮ್ಮಿಕೊಂಡಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಸಚಿವರಿಗೆ ಸಾಥ್ ನೀಡಿದ್ದಾರೆ.

ಸಿಕ್ಕಿಂ, ಅರುಣಾಚಲ ಪ್ರದೇಶ ಸೆಕ್ಟರ್‌ಗಳು ಸೇರಿದಂತೆ ಸುಮಾರು 3,500 ಕಿ.ಮೀ ಉದ್ದದ ಎಲ್‌ಎಸಿಯಾದ್ಯಂತ ಭಾರತೀಯ ಸೇನೆಯು ಯೋಧರ ಹಾಗೂ ಶಸ್ತ್ರಾಸ್ತ್ರಗಳ ನಿಯೋಜನೆಯನ್ನು ಗಣನೀಯವಾಗಿ ಹೆಚ್ಚಿಸಿದೆ.

ಸೇನೆಯ ಉನ್ನತ ಕಮಾಂಡರ್‌ಗಳು ಸಿಕ್ಕಿಂ ಸೆಕ್ಟರ್‌ ಎಲ್‌ಎಸಿಯಲ್ಲಿನ ಪರಿಸ್ಥಿತಿಯನ್ನು ಸಚಿವರಿಗೆ ಹಾಗೂ ಸೇನಾ ಮುಖ್ಯಸ್ಥರಿಗೆ ವಿಸ್ತೃತವಾಗಿ ವಿವರಿಸಿದ್ದಾರೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಯೋಧರಿಗೆ ವಿಜಯದಶಮಿಯ ಶುಭಾಶಯ ತಿಳಿಸಿದ ರಾಜನಾಥ್ ದೇಶದ ಗಡಿ ಕಾಯುವ ವಿಚಾರದಲ್ಲಿನ ಅವರ ಸಮರ್ಪಣಾ ಭಾವವನ್ನು ಶ್ಲಾಘಿಸಿದ್ದಾರೆ.

‘ನಿಮ್ಮಂತಹ ಧೈರ್ಯಶಾಲಿ ಯೋಧರಿಂದಾಗಿ ನಮ್ಮ ದೇಶದ ಗಡಿ ಸುರಕ್ಷಿತವಾಗಿದೆ. ಇಡೀ ದೇಶಕ್ಕೆ ನಿಮ್ಮ ಬಗ್ಗೆ ಹೆಮ್ಮೆಯಿದೆ’ ಎಂದು ಯೋಧರ ಜತೆಗಿನ ಸಂವಾದದ ವೇಳೆ ಸಿಂಗ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT