ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನ ಬೆಳವಣಿಗೆಯಿಂದ ಭಾರತಕ್ಕೆ ಹೊಸ ಭದ್ರತಾ ಸವಾಲು: ರಾಜನಾಥ್ ಸಿಂಗ್

Last Updated 31 ಆಗಸ್ಟ್ 2021, 4:08 IST
ಅಕ್ಷರ ಗಾತ್ರ

ನವದೆಹಲಿ: ಅಫ್ಗಾನಿಸ್ತಾನದಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಭಾರತಕ್ಕೆ ಹೊಸ ಭದ್ರತಾ ಸವಾಲು ಎದುರಾಗಿದೆ. ಅಲ್ಲಿನ ಬೆಳವಣಿಗೆಗಳಿಂದ ಪ್ರತಿಕೂಲ ಪರಿಣಾಮ ಎದುರಿಸುವುದನ್ನು ಭಾರತ ಬಯಸುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಅಮೆರಿಕ ಪಡೆಗಳು ಅಫ್ಗಾನಿಸ್ತಾನ ತೊರೆದ ಮತ್ತು ತಾಲಿಬಾನಿಗಳು ಕಾಬೂಲ್ ಅನ್ನೂ ವಶಪಡಿಸಿಕೊಂಡ ಸಂದರ್ಭದಲ್ಲೇ ರಕ್ಷಣಾ ಸಚಿವರಿಂದ ಈ ಹೇಳಿಕೆ ಮೂಡಿಬಂದಿದೆ.

ಅಫ್ಗಾನಿಸ್ತಾನದಲ್ಲಿ ಏನಾಗುತ್ತಿದೆ ಎಂಬುದನ್ನು ಸರ್ಕಾರವು ಸೂಕ್ಷ್ಮವಾಗಿ ಗಮನಿಸುತ್ತಿದೆ. ಅಲ್ಲಿನ ಬೆಳವಣಿಗೆಯು ನಮಗೆ ಹೊಸ ಭದ್ರತಾ ಸವಾಲನ್ನು ಉಂಟುಮಾಡಿದೆ. ಭಾರತೀಯರ ಸುರಕ್ಷತೆಯ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಭಾರತ ವಿರೋಧಿ ಪಡೆಗಳು ಗಡಿಯಾಚೆಗಿನ ಭಯೋತ್ಪಾದನೆಗಾಗಿ ಅಫ್ಗಾನಿಸ್ತಾನದ ಪರಿಸ್ಥಿತಿಯ ಲಾಭವನ್ನು ಪಡೆಯಲು ನಾವು ಬಯಸುವುದಿಲ್ಲ ಎಂದು ಸಿಂಗ್ ಹೇಳಿದ್ದಾರೆ.

ಅಫ್ಗಾನಿಸ್ತಾನದಲ್ಲಿ ಆಡಳಿತದ ಬದಲಾವಣೆಯನ್ನು ಪಾಕಿಸ್ತಾನ ಮತ್ತು ಅದರ ಮಿತ್ರ ರಾಷ್ಟ್ರ ಚೀನಾವು ಭಾರತ ವಿರೋಧಿ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆ ಇರುವುದು ಕೇಂದ್ರ ಸರ್ಕಾರವನ್ನು ಚಿಂತೆಗೀಡು ಮಾಡಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT