ಭಾನುವಾರ, ಜೂನ್ 26, 2022
28 °C

ಕೋವಿಡ್–19: ಆಸ್ಟ್ರೇಲಿಯಾ ರಕ್ಷಣಾ ಸಚಿವರ ಜತೆ ರಾಜನಾಥ್ ಸಿಂಗ್ ಮಾತುಕತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್–19 ಸಾಂಕ್ರಾಮಿಕದ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಸ್ಟ್ರೇಲಿಯಾ ರಕ್ಷಣಾ ಸಚಿವ ಪೀಟರ್ ಡಟನ್ ಜತೆ ಮಾತುಕತೆ ನಡೆಸಿದ್ದಾರೆ.

ಈ ಕುರಿತು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದು, ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾಂಧವ್ಯ, ಸಹಭಾಗಿತ್ವದ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಆಸ್ಟ್ರೇಲಿಯಾದೊಂದಿಗಿನ ವ್ಯೂಹಾತ್ಮಕ ಸಹಭಾಗಿತ್ವದ ಸಮಗ್ರ ಅನುಷ್ಠಾನಕ್ಕೆ ಭಾರತ ಬದ್ಧವಾಗಿದೆ ಎಂದೂ ಅವರು ಹೇಳಿದ್ದಾರೆ.

ಕೋವಿಡ್ ವಿರುದ್ಧದ ಹೋರಾಟದಲ್ಲಿ ಆಸ್ಟ್ರೇಲಿಯಾದ ಸಶಸ್ತ್ರ ಪಡೆಗಳು ಭಾರತವನ್ನು ಹೃತ್ಪೂರ್ವಕವಾಗಿ ಬೆಂಬಲಿಸಿವೆ ಎಂದೂ ಟ್ವೀಟ್‌ನಲ್ಲಿ ಸಚಿವರು ಉಲ್ಲೇಖಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು