ಬುಧವಾರ, ಮಾರ್ಚ್ 22, 2023
21 °C

ಗುಜರಾತ್| ಸಿಎಂ ಆಯ್ಕೆಗೆ ರಾಜನಾಥ್, ಬಿಎಸ್‌ವೈ, ಅರ್ಜುನ್ ಮುಂಡಾ ಕೇಂದ್ರ ವೀಕ್ಷಕರು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಗುಜರಾತ್‌ನ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಲುವಾಗಿ, ಗುಜರಾತ್‌ನಲ್ಲಿ ನಡೆಯಲಿರುವ ಪಕ್ಷದ ನೂತನ ಶಾಸಕರ ಸಭೆಗೆ ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಬಿ ಎಸ್ ಯಡಿಯೂರಪ್ಪ ಮತ್ತು ಅರ್ಜುನ್ ಮುಂಡಾ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ಶುಕ್ರವಾರ ನೇಮಿಸಲಾಗಿದೆ.

ಗುಜರಾತ್‌ ವಿಧಾನಸಭೆ ಚುನಾವಣೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, 182 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಪಡೆಯುವ ಮೂಲಕ ಐತಿಹಾಸಿಕ ಗೆಲುವು ದಾಖಲಿಸಿದೆ.

ನೂತನವಾಗಿ ಆಯ್ಕೆಯಾಗಿರುವ ಶಾಸಕರ ಸಭೆಯನ್ನು ಬಿಜೆಪಿ ಶನಿವಾರ ಬೆಳಗ್ಗೆ ಕರೆದಿದೆ. ಶಾಸಕಾಂಗ ಪಕ್ಷದ ನಾಯಕನನ್ನು ಈ ಸಭೆಯಲ್ಲಿ ಆಯ್ಕೆ ಮಾಡಲಾಗುತ್ತದೆ. ಅವರೇ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಅದರೆ, ಭೂಪೇಂದ್ರ ಪಟೇಲ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ಈ ಹಿಂದೆ ಘೋಷಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು