ಶನಿವಾರ, ಅಕ್ಟೋಬರ್ 1, 2022
20 °C

ಜಮ್ಮು– ಕಾಶ್ಮೀರದ ರಜೌರಿಯಲ್ಲಿ ಉಗ್ರರ ಆತ್ಮಾಹುತಿ ದಾಳಿ, ಮೂವರು ಯೋಧರು ಹುತಾತ್ಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿಯಿಂದ 25 ಕಿ.ಮೀ ದೂರದಲ್ಲಿ ಇಬ್ಬರು ಭಯೋತ್ಪಾದಕರು ಸೇನಾ ನೆಲೆ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದಾರೆ. ದಾಳಿ ನಡೆಸಿದ ಇಬ್ಬರೂ ಭಯೋತ್ಪಾದಕರನ್ನು ಭದ್ರತಾ ಪಡೆ ಹೊಡೆರುಳಿಸಿದೆ.

ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ ಎಂದು ವರದಿ ತಿಳಿಸಿದೆ.

ಭಯೋತ್ಪಾದಕರ ದಾಳಿಯಲ್ಲಿ ಗಾಯಗೊಂಡ ಸೇನಾ ಸಿಬ್ಬಂದಿಗಳಲ್ಲಿ ಒಬ್ಬ ಅಧಿಕಾರಿ ಕೂಡ ಸೇರಿದ್ದಾರೆ ಮತ್ತು ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. 16 ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಮಂಜಿಂದರ್ ಸಿಂಗ್ ಅವರು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಕಳೆದ ವರ್ಷ ಪಿರ್-ಪಂಜಾಲ್ ಪ್ರದೇಶd ರಾಜೌರಿ ಮತ್ತು ಪೂಂಚ್ ಜಿಲ್ಲೆಗಳಲ್ಲಿ ಉಗ್ರಗಾಮಿಗಳು ಹಲವಾರು ಮಾರಣಾಂತಿಕ ದಾಳಿಗಳನ್ನು ನಡೆಸಿದ್ದರು. ಜಮ್ಮು ಪ್ರದೇಶದಲ್ಲಿ ಇವು ಮುಸ್ಲಿಂ ಬಹುಸಂಖ್ಯಾತ ಜಿಲ್ಲೆಗಳಾಗಿದ್ದು, ಪಾಕಿಸ್ತಾನವು ಈ ಪ್ರದೇಶದಲ್ಲಿ ಮಾರಣಾಂತಿಕ ಉಗ್ರವಾದವನ್ನು ಮತ್ತೆ ಆರಂಭಿಸಲು ಬಯಸುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ರಜೌರಿ-ಪೂಂಚ್ ಅನ್ನು ಕಣಿವೆಯೊಂದಿಗೆ ಸಂಪರ್ಕಿಸುವ ಮೊಘಲ್ ರಸ್ತೆ, ಭದ್ರತಾ ಪಡೆಗಳು ಮತ್ತು ಗುಪ್ತಚರ ಸಂಸ್ಥೆಗಳಿಗೆ ಪ್ರಮುಖ ಕಳವಳವಾಗಿದೆ. ಪಾಕಿಸ್ತಾನದಿಂದ ರಜೌರಿ ಮತ್ತು ಪೂಂಚ್‌ಗೆ ನುಸುಳುವ ಉಗ್ರಗಾಮಿಗಳು ಮೊಘಲ್ ರಸ್ತೆಯ ಮೂಲಕ ಕಣಿವೆಯನ್ನು ತಲುಪುವುದು ಸುಲಭವಾಗಿದೆ. ಈ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯ ಟ್ರಕ್‌ಗಳು ಚಲಿಸುವುದರಿಂದ, ಉಗ್ರಗಾಮಿ ನಿರ್ವಾಹಕರಿಗೆ ಶಸ್ತ್ರಾಸ್ತ್ರಗಳನ್ನು ಸಾಗಿಸಲು ಸಹ ಸುಲಭವಾಗುತ್ತದೆ’ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು