ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭಾ ಕಲಾಪ ನಾಳೆಗೆ ಮುಂದೂಡಿಕೆ

Last Updated 2 ಫೆಬ್ರುವರಿ 2021, 8:19 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭಾ ಕಲಾಪ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದವು. ಈ ಹಿನ್ನೆಲೆಯನ್ನು ಕಲಾಪವನ್ನು ನಾಳೆ (ಮಂಗಳವಾರ) ಬೆಳಿಗ್ಗೆ 9 ಗಂಟೆ ವರೆಗೆ ಮುಂದೂಡಲಾಗಿದೆ.

ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿ ನಡೆಯುತ್ತಿರುವ ವೇಳೆ ಹಲವು ವಿರೋಧ ಪಕ್ಷಗಳು ಕೃಷಿ ಕಾಯ್ದೆಯ ವಿರುದ್ಧ ಘೋಷಣೆಗಳನ್ನು ಕೂಗಿದವು. ಈ ಕಾಯ್ದೆಯ ಬಗ್ಗೆ ರೈತರ ಜತೆ ಚರ್ಚಿಸಬೇಕು ಎಂದು ಒತ್ತಾಯಿಸಿದವು.

ಸಭಾಧ್ಯಕ್ಷ ಎಂ.ವೆಂಕಯ್ಯನಾಯ್ಡು ಅವರುಗದ್ದಲದ ಕಾರಣದಿಂದಕಲಾಪವನ್ನು10:30ಕ್ಕೆಮುಂದೂಡಿದರು.ಬಳಿಕ ಅದನ್ನು11:30ರ ವರೆಗೆ ವಿಸ್ತರಿಸಲಾಯಿತು.ಗದ್ದಲ ಮುಂದುವರಿದದ್ದರಿಂದ 12.30ಕ್ಕೆ ಮುಂದೂಡಲಾಯಿತು.ಅಂತಿಮವಾಗಿ ನಾಳೆಗೆ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT