ಮಂಗಳವಾರ, ಸೆಪ್ಟೆಂಬರ್ 21, 2021
27 °C
ದಿನದ ಮಟ್ಟಿಗೆ ರಾಜ್ಯಸಭೆ ಮುಂದೂಡಿಕೆ

‘ಹಣಕಾಸು ನಷ್ಟ ಹಾಗೂ ದಿವಾಳಿ ಸಂಹಿತೆ‘ ತಿದ್ದುಪಡಿ ಮಸೂದೆ ಅಂಗೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆಯೇ ‘ಹಣಕಾಸು ನಷ್ಟ ಹಾಗೂ ದಿವಾಳಿ ಸಂಹಿತೆ‘ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಅಂಗೀಕರಿಸಿದ ನಂತರ ರಾಜ್ಯಸಭೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು.

ಪೆಗಾಸಸ್‌ ಗೂಢಚರ್ಯೆ ತಂತ್ರಾಂಶದ ದುರ್ಬಳಕೆ, ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರ ಪ್ರತಿಭಟನೆ ಹಾಗೂ ಇತರ ವಿಷಯಗಳ ಕುರಿತು ಚರ್ಚೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದವು.

ನಂತರ, ವಿರೋಧ ಪಕ್ಷಗಳು ಪ್ರತಿಭಟನೆಗೆ ಮುಂದಾದವು. ವಿರೋಧ ಪಕ್ಷಗಳ ಗದ್ದಲದ ನಡುವೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಸೂದೆಯನ್ನು ಮಂಡಿಸಿದರು. ಮಸೂದೆ ಮೇಲೆ ಕೆಲ ಹೊತ್ತಿನ ಚರ್ಚೆ ನಡೆಯಿತಲ್ಲದೇ, ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.

ವಿರೋಧ ಪಕ್ಷಗಳ ಸದಸ್ಯರು ಸಭಾಪತಿ ಪೀಠದ ಮುಂದೆ ಬಂದು ಪ್ರತಿಭಟನೆಯನ್ನು ತೀವ್ರಗೊಳಿಸಿದರು. ಘೋಷಣೆಗಳನ್ನೂ ಕೂಗಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು