ಗುರುವಾರ , ಸೆಪ್ಟೆಂಬರ್ 16, 2021
24 °C

ವಿರೋಧ ಪಕ್ಷಗಳ ಗದ್ದಲ: ರಾಜ್ಯಸಭಾ ಕಲಾಪ ಮುಂದೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮುಂಗಾರು ಅಧಿವೇಶನದ ಎರಡನೇ ದಿನವಾದ ಮಂಗಳವಾರ ‘ಪೆಗಾಸಸ್ ಗೂಢಾಚಾರಿಕೆ‘ ವಿವಾದ ಸೇರಿದಂತೆ ವಿವಿಧ ವಿಷಯಗಳ ಚರ್ಚೆಗೆ ವಿರೋಧ ಪಕ್ಷಗಳು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಸಂಸತ್ತಿನ ರಾಜ್ಯಸಭಾ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ  ಮುಂದೂಡಲಾಯಿತು.

 ಕಲಾಪ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳ ಸದಸ್ಯರು, ಎಲ್ಲ ವಿಷಯಗಳನ್ನು ಬದಿಗಿಟ್ಟು, ನಾವು ನಿಯಮ 267 ರ ಅಡಿಯಲ್ಲಿ ಸಲ್ಲಿಸಿರುವ ವಿಷಯಗಳನ್ನೇ ಚರ್ಚೆಗೆ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.  ನಂತರ ಈ ವಿಚಾರವಾಗಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ತೀವ್ರ ಗದ್ದಲದ ವಾತಾವರಣ ಸೃಷ್ಟಿಯಾದ ಕಾರಣ ಸಭಾಧ್ಯಕ್ಷ ಎಂ.ವೆಂಕಯ್ಯನಾಯ್ಡು ಅವರು ಕಲಾಪವನ್ನು ಮಧ್ಯಾಹ್ನ 12ವರೆಗೆ ಮುಂದೂಡಿದರು.

ಇದಕ್ಕೂ ಮುನ್ನ ವಿರೋಧ ಪಕ್ಷದ ಸದಸ್ಯರು ನಿಯಮ 267ರ ಅಡಿಯಲ್ಲಿ ಪೆಗಾಸಸ್‌ ಗೂಢಚಾರಿಕೆ, ನೂತನ ವಿವಾದಾತ್ಮಕ ಕೃಷಿ ಕಾಯ್ದೆಗಳು ಮತ್ತು ತೈಲ ಬೆಲೆ ಏರಿಕೆ ಸೇರಿದಂತೆ ವಿವಿಧ ವಿಷಯಗಳನ್ನು ಚರ್ಚೆಗೆ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು