ಭಾನುವಾರ, ನವೆಂಬರ್ 29, 2020
21 °C

ರಾಜ್ಯಸಭೆ ಉಪ ಚುನಾವಣೆ: ಕೆ.ನಾರಾಯಣ ಬಿಜೆಪಿ ಅಭ್ಯರ್ಥಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಶೋಕ್‌ ಗಸ್ತಿ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಯಾಗಿ ಪ್ರಕಾಶಕ, ಮುದ್ರಕ ಕೆ.ನಾರಾಯಣ ಆಯ್ಕೆಯಾಗಿದ್ದಾರೆ.

ಡಿಸೆಂಬರ್‌ 1ರಂದು ಉಪಚುನಾವಣೆ ನಿಗದಿಯಾಗಿದ್ದು, ನಾಮಪತ್ರ ಸಲ್ಲಿಸಲು ನವೆಂಬರ್‌ 18 (ಬುಧವಾರ) ಕೊನೆಯ ದಿನವಾಗಿದೆ. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಈ ಆಯ್ಕೆ ನಡೆಯಲಿದ್ದು, ಬಿಜೆಪಿಗೆ ಪೂರ್ಣ ಬಹುಮತ
ಇರುವ ಕಾರಣ ನಾರಾಯಣ ಅವರ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ. ದೇವಾಂಗ ಸಮುದಾಯದ ನಾರಾಯಣ ಮಂಗಳೂರು ಮೂಲದದವರು. ಬೆಂಗಳೂರಿನಲ್ಲಿ ಪ್ರಮುಖ ಪ್ರಕಾಶನ ಸಂಸ್ಥೆ (ಸ್ಪ್ಯಾನ್ ಪ್ರಿಂಟ್) ಹೊಂದಿದ್ದಾರೆ. ಬಹು ಬಣ್ಣದ ಮುದ್ರಣ (ಮಲ್ಟಿ ಕಲರ್ ಪ್ರಿಂಟಿಂಗ್) ತಂತ್ರಜ್ಞಾನವನ್ನು 1982ರಲ್ಲಿ ಮೊದಲ ಬಾರಿಗೆ ಬೆಂಗಳೂರಿಗೆ ಪರಿಚಯಿಸಿದ್ದರು.

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌)ದಲ್ಲಿ ಸಕ್ರಿಯರಾಗಿದ್ದ ಇವರು, ದಶಕಗಳ ಹಿಂದೆ ರಾಜ್ಯದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಕರಪತ್ರಗಳನ್ನು ಮುದ್ರಿಸಿಕೊಡುವ ಕಾರ್ಯವನ್ನು ನಿರ್ವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.