ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಹೆಸರು ಮುಂಚೂಣಿಗೆ

Last Updated 27 ಸೆಪ್ಟೆಂಬರ್ 2022, 14:58 IST
ಅಕ್ಷರ ಗಾತ್ರ

ನವದೆಹಲಿ: ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಉಲ್ಬಣಗೊಂಡ ಬಳಿಕ, ಪಕ್ಷದ ರಾಷ್ಟ್ರೀಯ ಅಧ್ಯಕ್ಷೀಯ ಚುನಾವಣೆಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೆಸರು ಮುಂಚೂಣಿಗೆ ಬಂದಿದೆ.ಈ ವಿಚಾರವನ್ನು ಕಾಂಗ್ರೆಸ್‌ ಉನ್ನತ ಮೂಲಗಳು ತಿಳಿಸಿವೆ.

ಈ ಬಾರಿಯ ಚುನಾವಣೆಯಲ್ಲಿರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅವರು ಸ್ಪರ್ಧಿಸಲು ಸಜ್ಜಾಗಿದ್ದರು. ಆದರೆ, ರಾಜ್ಯದ ಮುಂದಿನ ಸಿಎಂ ಆಯ್ಕೆ ವಿಚಾರವಾಗಿಅಲ್ಲಿನ ಕಾಂಗ್ರೆಸ್‌ ಶಾಸಕರಲ್ಲಿ ಒಡಕು ಮೂಡಿದೆ. ಹೀಗಾಗಿ ಗೆಹಲೋತ್‌ ಸ್ಪರ್ಧಿಸುವುದು ಅನುಮಾನವಾಗಿದೆ.

ಕೇರಳದ ತಿರುವನಂತಪುರ ಸಂಸದ ಶಶಿ ತರೂರ್‌ ಅವರು ಸೆಪ್ಟೆಂಬರ್‌ 30ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅವರಿಗೆ ಎದುರಾಳಿಯಾಗಿಹಿರಿಯ ನಾಯಕಿ ಸೆಲ್ಜಾ ಕುಮಾರಿ ಅಥವಾ ರಾಹುಲ್ ಗಾಂಧಿ ಅವರ ಆಪ್ತರೆನಿಸಿಕೊಂಡಿರುವ ಕೆ.ಸಿ. ವೇಣುಗೋಪಾಲ್ ಕಣಕ್ಕಿಳಿಯಲಿದ್ದಾರೆ ಎಂದು ಈ ಮೊದಲು ವರದಿಯಾಗಿತ್ತು.ಸೆಲ್ಜಾ ಕುಮಾರಿ ಮತ್ತುವೇಣುಗೋಪಾಲ್ ಹೆಸರುಗಳು ಈಗಲೂ ಚಾಲ್ತಿಯಲ್ಲಿವೆ.

ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಖಜಾಂಚಿ ಪವನ್‌ ಕುಮಾರ್‌ ಬನ್ಸಲ್‌ ಅವರು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಮುಖ್ಯಸ್ಥ ಮಧುಸೂದನ್‌ ಮಿಸ್ತ್ರಿ ಅವರಿಂದ ನಾಮಪತ್ರದ ಅರ್ಜಿ ಪಡೆದುಕೊಂಡಿದ್ದಾರೆ.

ಹೀಗಾಗಿ ಚುನಾವಣಾ ಕಣ ಮತ್ತಷ್ಟು ಕುತೂಹಲ ಕೆರಳಿಸಿದೆ.

ಕಾಂಗ್ರೆಸ್‌ ಪಕ್ಷದ ಪ್ರಕಟಣೆ ಪ್ರಕಾರ ಸೆಪ್ಟೆಂಬರ್‌ 24 ರಿಂದ 30ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಅಕ್ಟೋಬರ್‌ 1ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಹಿಂಪಡೆಯಲು ಅಕ್ಟೋಬರ್‌ 8 ಕೊನೇ ದಿನವಾಗಿದೆ. ಅದೇ ದಿನ (ಅ.8) ಸಂಜೆ 5ರ ವೇಳೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗಲಿದೆ.

ಅಕ್ಟೋಬರ್‌ 17ರಂದು ಚುನಾವಣೆ ನಡೆಯಲಿದ್ದು, ಎರಡು ದಿನಗಳ ಬಳಿಕ (19ರಂದು) ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT