ಶನಿವಾರ, ಆಗಸ್ಟ್ 13, 2022
24 °C

ನಾವು ಕಂಗನಾ ರನೌತ್‌ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದೇವೆ: ಸಂಜಯ್‌ ರಾವುತ್‌

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಮುಂಬೈ: ನಟಿ ಕಂಗನಾ ರನೌತ್‌ ಅವರ ಬಗ್ಗೆ ಮಾತನಾಡುವುದನ್ನು ನಾವು ನಿಲ್ಲಿಸಿದ್ದೇವೆ ಎಂದು ಶಿವಸೇನಾ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ತಿಳಿಸಿದ್ದಾರೆ. 

ಕಂಗನಾ ವಿಷಯಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳು ಹಾಗೂ ಎಲ್ಲರ ಪ್ರತಿಕ್ರಿಯೆಗಳನ್ನು ನಾವು ಗಮನಿಸುತ್ತಿದ್ದೇವೆ. ಅವರ (ಕಂಗನಾ) ಹಿಂದಿರುವುದು ಯಾವ ರಾಜಕೀಯ ಪಕ್ಷ ಮತ್ತು ಯಾವ ವ್ಯಕ್ತಿ ಎಂಬುದನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ. 

ನೌಕಾಪಡೆಯ ನಿವೃತ್ತ ಅಧಿಕಾರಿಯ ಮೇಲೆ ಪ್ರಕರಣ ಕುರಿತು ಪ್ರತಿಕ್ರಿಯಿಸಿದ್ದು, ‘ಮಹಾರಾಷ್ಟ್ರ ದೊಡ್ಡ ರಾಜ್ಯವಾಗಿದೆ. ಇಲ್ಲಿ ಕಾನೂನನ್ನು ಯಾವಾಗಲೂ ಗೌರವಿಸಲಾಗುತ್ತದೆ. ಯಾವುದೇ ಮುಗ್ಧ ವ್ಯಕ್ತಿಯ ಮೇಲೆ ಹಲ್ಲೆ ಮಾಡಬಾರದು. ಇದು ಸರ್ಕಾರದ ನಂಬಿಕೆಯಾಗಿದೆ’ ಎಂದಿದ್ದಾರೆ. 

‘ಮುಂಬರುವ ಸಂಸತ್‌ ಅಧಿವೇಶನದಲ್ಲಿ ಇಂಡೋ–ಚೀನಾ ಗಡಿ ಸಮಸ್ಯೆ, ಜಿಎಸ್‌ಟಿ, ನಿರುದ್ಯೋಗ ಸಮಸ್ಯೆ ಬಗ್ಗೆ ಚರ್ಚಿಸುತ್ತೇನೆ’ ಎಂದು ಹೇಳಿದ್ದಾರೆ.

ಇನ್ನಷ್ಟು... 

ನನಗಾದ ಅನ್ಯಾಯದ ಬಗ್ಗೆ ರಾಜ್ಯಪಾಲರಿಗೆ ತಿಳಿಸಿದ್ದೇನೆ: ನಟಿ ಕಂಗನಾ ರನೌತ್‌

 ಮುಂಬೈ ನಗರವು ಪಾಕ್‌ ಆಕ್ರಮಿತ ಕಾಶ್ಮೀರದಂತೆ ಏಕೆ ಭಾಸವಾಗುತ್ತಿದೆ: ಕಂಗನಾ ವಿವಾದ

 ಮಹಾರಾಷ್ಟ್ರ ಸುರಕ್ಷಿತವಲ್ಲ ಎನ್ನುವವರಿಗೆ ಇಲ್ಲಿ ಬದುಕುವ ಹಕ್ಕಿಲ್ಲ: ಗೃಹ ಸಚಿವ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು