ಸೋಮವಾರ, ಅಕ್ಟೋಬರ್ 26, 2020
27 °C

ಸಾಂಕ್ರಾಮಿಕ ರೋಗಗಳ ತಿದ್ದುಪಡಿ ಮಸೂದೆಗೆ ರಾಜ್ಯಸಭೆ ಅಂಗೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸಾಂಕ್ರಾಮಿಕ ರೋಗಗಳ (ತಿದ್ದುಪಡಿ) ಮಸೂದೆ–2020ಕ್ಕೆ ಶನಿವಾರ ರಾಜ್ಯಸಭೆಯ ಅನುಮೋದನೆ ಲಭಿಸಿದೆ.

ಕೋವಿಡ್‌–19 ವಿರುದ್ಧ ಹಗಲಿರುಳೆನ್ನದೆ ಹೋರಾಡುತ್ತಿರುವ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವವರನ್ನು ಗರಿಷ್ಠ ಐದು ವರ್ಷದವರೆಗೆ ಜೈಲು ಶಿಕ್ಷೆಗೆ ಗುರಿಪಡಿಸಲು ಈ ಮಸೂದೆಯಲ್ಲಿ ಅವಕಾಶವಿದೆ.

1897ರ ಸಾಂಕ್ರಾಮಿಕ ರೋಗಗಳ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರವು ಈ ವರ್ಷದ ಏಪ್ರಿಲ್‌ನಲ್ಲಿ ಸುಗ್ರೀವಾಜ್ಞೆ ಹೊರಡಿಸಿತ್ತು. ಸಾಂಕ್ರಾಮಿಕ ರೋಗಗಳ (ತಿದ್ದುಪಡಿ) ಮಸೂದೆ–2020 ಅನ್ನು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಶನಿವಾರ ರಾಜ್ಯಸಭೆಯಲ್ಲಿ ಮಂಡಿಸಿದರು.

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಆರೋಗ್ಯ ಸೇವೆ ಒದಗಿಸುತ್ತಿರುವ ವೈದ್ಯರು, ನರ್ಸ್‌ಗಳು, ಪ್ಯಾರಾಮೆಡಿಕಲ್‌ ಕಾರ್ಯಕರ್ತರು, ಸಮುದಾಯ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವುದು ಹಾಗೂ ಅವರ ಆಸ್ತಿಪಾಸ್ತಿಗೆ ಹಾನಿ ಮಾಡುವುದನ್ನು ತಡೆಯುವುದು ಈ ಮಸೂದೆಯ ಉದ್ದೇಶವಾಗಿದೆ.

ಆರೋಗ್ಯ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಗಳ ತನಿಖೆಯ ಅಧಿಕಾರವನ್ನು ಇನ್‌ಸ್ಪೆಕ್ಟರ್‌ ದರ್ಜೆಯ ಅಧಿಕಾರಿಗೆ ನೀಡಲಾಗಿದ್ದು, ಅವರು 30 ದಿನಗಳೊಳಗೆ ಇದರ ತನಿಖೆ ನಡೆಸಬೇಕು. ಒಂದು ವರ್ಷದೊಳಗೆ ವಿಚಾರಣೆ ಮುಗಿಸಬೇಕು. ಕಾನೂನು ಉಲ್ಲಂಘಿಸಿದ್ದು ಸಾಬೀತಾದರೆ ಆರೋಪಿಗೆ ಕನಿಷ್ಠ ಮೂರು ತಿಂಗಳಿಂದ ಗರಿಷ್ಠ ಐದು ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ₹50,000 ದಿಂದ ₹ 2 ಲಕ್ಷದವರೆಗೆ ದಂಡವನ್ನೂ ವಿಧಿಸಬಹುದು ಎಂಬುದನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು