ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆ: ರಾಜ್ಯಸಭೆ ಕಲಾಪ 2ಕ್ಕೆ ಮುಂದೂಡಿಕೆ

Last Updated 22 ಜುಲೈ 2021, 6:52 IST
ಅಕ್ಷರ ಗಾತ್ರ

ನವದೆಹಲಿ: ‘ದೈನಿಕ್ ಭಾಸ್ಕರ್‘ ಪತ್ರಿಕಾ ಸಮೂಹ ಸಂಸ್ಥೆಗಳ ಮೇಲೆ ನಡೆದಿರುವ ಆದಾಯ ತೆರಿಗೆ ದಾಳಿ ವಿಚಾರ ಮತ್ತು ಪೆಗಾಸಸ್‌ ಗೂಢಚಾರಿಕೆ ಪ್ರಕರಣದ ಕುರಿತು ಚರ್ಚೆ ನಡೆಸುವಂತೆ ಒತ್ತಾಯಿಸಿ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಸಂಸದರು ‌ಪ್ರತಿಭಟನೆ ನಡೆಸಿ, ಗದ್ದಲ ಉಂಟು ಮಾಡಿದ ಹಿನ್ನೆಲೆಯಲ್ಲಿ, ಸಂಸತ್ತಿನ ಕಲಾಪವನ್ನು 2ಗಂಟೆಗೆ ಮುಂದೂಡಲಾಯಿತು.

ಕಾಂಗ್ರೆಸ್‌ ನಾಯಕ ದಿಗ್ವಿಜಯಸಿಂಗ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷಗಳ ಸದಸ್ಯರು, ದೇಶದ ಅನೇಕ ನಗರಗಳಲ್ಲಿರುವ ಮಾಧ್ಯಮ ಸಮೂಹದ ಕಚೇರಿಗಳಿಗೆ ಮೇಲೆ ನಡೆದಿರುವ ದಾಳಿಗಳ ಕುರಿತು ಪ್ರಸ್ತಾಪಿಸಿದರು.

‘ನರೇಂದ್ರ ಮೋದಿ ಸರ್ಕಾರ, ತನ್ನ ರಾಜಕೀಯ ವಿರೋಧಿಗಳು, ಪತ್ರಕರ್ತರ ವಿರುದ್ಧ ಪೆಗಾಸಸ್ ತಂತ್ರಾಂಶದೊಂದಿಗೆ ಬೇಹುಗಾರಿಕೆ ನಡೆಸುತ್ತಿದೆ‘ ಎಂಬ ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ಟಿಎಂಸಿ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ನಾಯಕರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT