ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ: ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ

Last Updated 21 ಜುಲೈ 2022, 18:19 IST
ಅಕ್ಷರ ಗಾತ್ರ

ನವದೆಹಲಿ: ‘ಬೇರೆ ರಾಜ್ಯಗಳಿಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ವಿಸ್ತರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದರು.

ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಅವರು ರಾಜ್ಯಸಭಾ ಸದಸ್ಯರಾಗಿಗುರುವಾರ ಕನ್ನಡದಲ್ಲಿ ದೇವರ ಹೆಸರಿನಲ್ಲಿಪ್ರಮಾಣವಚನ ಸ್ವೀಕರಿಸಿದರು.ವೀರೇಂದ್ರ ಹೆಗ್ಗಡೆ, ಸಂಗೀತ ನಿರ್ದೇಶಕ ಇಳಯರಾಜ, ಅಥ್ಲೀಟ್‌ ಪಿ.ಟಿ.ಉಷಾ ಹಾಗೂ ಚಲನಚಿತ್ರ ಕಥೆ– ಸಂಭಾಷಣೆಕಾರ ವಿಜಯೇಂದ್ರ ಪ್ರಸಾದ್‌ ಅವರನ್ನು ಜೂನ್‌ 7ರಂದು ನಾಮನಿರ್ದೇಶನ ಮಾಡಲಾಗಿತ್ತು. ಪ್ರಮಾಣವಚನ ಸ್ವೀಕರಿಸಿದ ಬಳಿಕ ಹೆಗ್ಗಡೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಧನ್ಯವಾದ ಹೇಳಿದರು.

ಬಳಿಕ ಸುದ್ದಿಗಾರರ ಜತೆಗೆ ಮಾತ ನಾಡಿದ ಅವರು, ‘ಯೋಜನೆಯನ್ನು ವಿಸ್ತರಿಸಬೇಕು ಎಂದು ಈ ಹಿಂದೆ ಹಲವು ಮಂದಿ ಮನವಿ ಮಾಡಿದ್ದರು. ಆಗ ಸಾಧ್ಯ ಆಗಿರಲಿಲ್ಲ. ಆದರೆ, ಈಗ ಸರ್ಕಾರ ನಮ್ಮ ಜತೆಗೆ ಇದೆ. ಹೀಗಾಗಿ, ಯೋಜನೆಯನ್ನು ವಿಸ್ತರಣೆ ಮಾಡಲು ವಿಚಾರ ಮಾಡುತ್ತಿದ್ದೇವೆ’ ಎಂದರು.

‘ಗ್ರಾಮೀಣಾಭಿವೃದ್ಧಿ ಯೋಜನೆ ಮೊದಲು ಪ್ರಯೋಗ ಆಗಿತ್ತು. 40 ವರ್ಷಗಳಲ್ಲಿ ಸ್ಥಿರ ಆಗಿದೆ. ರುಡ್‌ಸೆಟ್‌ ಯೋಜನೆ ದೇಶದ ವಿವಿಧ ಕಡೆಗಳಿಗೆ ವಿಸ್ತರಣೆ ಆಗಿದೆ. ಇದಕ್ಕೆ ಕೇಂದ್ರ ಸರ್ಕಾರ ನೀಡಿದ ಬೆಂಬಲ ಕಾರಣ’ ಎಂದು ಅವರು ಹೇಳಿದರು.

‘ಈ ಹಿಂದೆ ಪದ್ಮ ಪ್ರಶಸ್ತಿಗಳನ್ನು ಪಡೆಯಲು, ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲು ಅರ್ಜಿ ಹಾಕಬೇಕಿತ್ತು. ನಾಯಕರಿಗೆದುಂಬಾಲು ಬೀಳಬೇಕಿತ್ತು. ಕಳೆದ ಐದು ವರ್ಷಗಳಲ್ಲಿ ಈ ವ್ಯವಸ್ಥೆಯಲ್ಲಿ ಬಹಳ ಸುಧಾರಣೆ ಆಗಿದೆ. ಸಾಧಕರನ್ನು ಗುರುತಿಸಿ ಆಯ್ಕೆ ಮಾಡುತ್ತಿದ್ದಾರೆ. ನಾಮನಿರ್ದೇಶನಗೊಳ್ಳುವಬಗ್ಗೆ ಆಸೆ ಪಟ್ಟಿರಲಿಲ್ಲ. ಆಕಸ್ಮಿಕವಾಗಿ ಸಿಕ್ಕಿದೆ. ಸಂತೋಷವಾಗಿದೆ. ರಾಜ್ಯಸಭಾ ಸದಸ್ಯರಾಗಿರುವುದರಿಂದ ಇನ್ನಷ್ಟು ಸೇವೆ ಮಾಡಲು ಅವಕಾಶ ಸಿಕ್ಕಿದೆ’ಎಂದು ಅವರು ಹೇಳಿದರು.

‘ನಾನು ಯಾವುದೇ ಪಕ್ಷದ ಜತೆಗೆ ಗುರುತಿಸಿಕೊಳ್ಳುವುದಿಲ್ಲ. ಈ ಗೌರವ ಸದಸ್ಯತ್ವಕ್ಕೆ ಸ್ವಾತಂತ್ರ್ಯ ಇದೆ. ಈ ಸ್ವಾತಂತ್ರ್ಯವನ್ನು ಬಳಸಿಕೊಂಡು ಯಾವುದೇ ರಾಜಕೀಯ ವ್ಯವಸ್ಥೆಯಡಿ ಇರದೆ ಕೆಲಸ ಮಾಡಬಹುದು ಎಂದು ನಂಬಿದ್ದೇನೆ. ಐವತ್ತು ವರ್ಷಗಳಿಂದ ಯಾವುದೇ ರಾಜಕೀಯ ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT