ಬುಧವಾರ, ಜನವರಿ 19, 2022
23 °C

ಎಂಎಸ್‌ಪಿ ಖಾತರಿಗೆ ಕಾನೂನು ತರಲು ರಾಕೇಶ್ ಟಿಕಾಯತ್‌ ಆಗ್ರಹ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ದೇಶದ ರೈತರ ಹಿತ ಕಾಯಲು ಕೇಂದ್ರ ಸರ್ಕಾರ ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಸಂಬಂಧ ಕಾನೂನು ತರಬೇಕು ಎಂದು ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಭಾನುವಾರ ಆಗ್ರಹಿಸಿದರು.

ಮುಂಬೈನ ಆಜಾದ್‌ ಮೈದಾನದಲ್ಲಿ ಭಾನುವಾರ ನಡೆದ ಕಿಸಾನ್‌ ಮಹಾಪಂಚಾಯತ್‌ನಲ್ಲಿ ಭಾಗವಹಿಸಿದ್ದ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿ ಆಗಿದ್ದಾಗ ಎಂಎಸ್‌ಪಿಯ ಬೆಂಬಲಿಗರಾಗಿದ್ದರು. ಗುಜರಾತ್‌ ಮತ್ತು ರೈತರ ಹಿತಕ್ಕಾಗಿ ದೇಶದಾದ್ಯಂತ ಎಂಎಸ್‌ಪಿ ಖಾತರಿಪಡುಸವ ಕಾನೂನು ಜಾರಿಗೊಳಿಸಬೇಕು ಎಂದು ಅವರು ಬಯಸಿದ್ದರು ಎಂಬುದಾಗಿ ಟಿಕಾಯತ್‌ ಹೇಳಿದರು.

ಆದರೆ, ಈಗ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ವಿಷಯದ ಚರ್ಚೆಯಿಂದ ದೂರ ಓಡುತ್ತಿದೆ ಎಂದು ಅವರು ದೂರಿದರು.

ಕೃಷಿ ಮತ್ತು ಕಾರ್ಮಿಕ ಕ್ಷೇತ್ರಗಳಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳ ಬಗ್ಗೆಯೂ ಕೇಂದ್ರ ಸರ್ಕಾರ ಗಮನ ಹರಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ದೇಶದಾದ್ಯಂತ ಸಂಚರಿಸುವುದಾಗಿ ಅವರು ಹೇಳಿದರು.

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ವರ್ಷವಿಡೀ ನಡೆದ ಪ್ರತಿಭಟನಾ ಆಂದೋಲನದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಬೇಕು ಎಂದು ಟಿಕಾಯತ್ ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು