ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಕಂದರ್‌ಪುರ: ರೈತರ ರ‍್ಯಾಲಿ ಉದ್ದೇಶಿಸಿ ಬಿಕೆಯು ನಾಯಕ ರಾಕೇಶ್ ಟಿಕಾಯತ್ ಭಾಷಣ

Last Updated 9 ಮಾರ್ಚ್ 2021, 15:28 IST
ಅಕ್ಷರ ಗಾತ್ರ

ಬಲ್ಲಿಯಾ: ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧದ ಆಂದೋಲನಕ್ಕೆ ಉತ್ತೇಜನ ನೀಡುವ ಸಲುವಾಗಿ, ಬಿಕೆಯು ನಾಯಕ ರಾಕೇಶ್ ಟಿಕಾಯತ್ ಬುಧವಾರ ಬಿಹಾರ ರಾಜ್ಯ ಗಡಿಯಿಂದ ಕೇವಲ ಐದು ಕಿ. ಮೀ ದೂರದಲ್ಲಿರುವ ಸಿಕಂದೇಪುರದಲ್ಲಿ ರೈತರ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪೂರ್ವ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಹೊಸ ಕೃಷಿ ಕಾನೂನುಗಳ ವಿರುದ್ಧದ ಆಂದೋಲನವನ್ನು ಬಲಪಡಿಸಲು ಸಿಕಂದರ್‌ಪುರದಲ್ಲಿ ಪಂಚಾಯತ್ ನಡೆಸಲಾಗುತ್ತಿದೆ ಎಂದು ಪೂರ್ವಾಂಚಲ್ ಪ್ರದೇಶದ ಭಾರತೀಯ ಕಿಸಾನ್ ಸಭಾದ ಉಸ್ತುವಾರಿ ಅಜಿತ್ ರೈ ತಿಳಿಸಿದ್ದಾರೆ.

ಬುಧವಾರದ 'ಕಿಸಾನ್ ಮಹಾಪಂಚಾಯತ್' ಅನ್ನು ಕಾಂಗ್ರೆಸ್, ಎಡ ಮತ್ತು ವಿವಿಧ ರೈತ ಸಂಘಟನೆಗಳು ಬೆಂಬಲಿಸುತ್ತಿವೆ ಎಂದು ರೈ ಹೇಳಿದರು.

ಈಮಧ್ಯೆ, ಘಟನೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಪಿನ್ ತಾಡಾ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಮತ್ತು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ನೀಡುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಸಾವಿರಾರು ರೈತರು ಕಳೆದ ವರ್ಷ ನವೆಂಬರ್‌ನಿಂದ ದೆಹಲಿಯ ಮೂರು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದೊಂದಿಗೆಹಲವು ಸುತ್ತಿನ ಮಾತುಕತೆ ನಡೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT