ಗುರುವಾರ , ಅಕ್ಟೋಬರ್ 21, 2021
29 °C

ನವಜೋತ್ ಸಿಂಗ್‌ ಸಿಧು ಪಂಜಾಬ್‌ ರಾಜಕಾರಣದ ರಾಖಿ ಸಾವಂತ್‌: ಎಎಪಿ ವ್ಯಂಗ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಹೊಸದಿಲ್ಲಿ: ಪಂಜಾಬ್‌ನ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್‌ ಸಿಧು ವಿರುದ್ಧ ಎಎಪಿ ಮುಖಂಡ ರಾಘವ್‌ ಚಡ್ಡಾ ವಾಗ್ದಾಳಿ ನಡೆಸಿದ್ದಾರೆ.

ನವಜೋತ್ ಸಿಂಗ್‌ ಸಿಧು ಪಂಜಾಬ್‌ ರಾಜಕಾರಣದ ರಾಖಿ ಸಾವಂತ್‌ ಎಂದು ರಾಘವ್‌ ಚಡ್ಡಾ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಶುಕ್ರವಾರ ಟ್ವೀಟ್‌ ಮಾಡಿರುವ ಅವರು, 'ಕ್ಯಾಪ್ಟನ್ (ಮುಖ್ಯಮಂತ್ರಿ ಅಮರಿಂದರ್ ಸಿಂಗ್) ವಿರುದ್ಧ ನಿರಂತರ ವಾಗ್ದಾಳಿ ನಡೆಸುವ ಸಿಧು ಅವರನ್ನು ಕಾಂಗ್ರೆಸ್ ಹೈಕಮಾಂಡ್ ತರಾಟೆಗೆ ತೆಗೆದುಕೊಂಡಿದೆ. ಆದ್ದರಿಂದ, ಅವರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಹೇಳಿಕೆ ನೀಡಿದ್ದಾರೆ. ಸಿಧು ಪಂಜಾಬ್ ರಾಜಕೀಯದ ರಾಖಿ ಸಾವಂತ್' ಎಂದು ಚಡ್ಡಾ ಟ್ವೀಟ್ ಮಾಡಿದ್ದಾರೆ.

'ನಾಳೆಯವರೆಗೆ ಕಾಯಿರಿ, ಸಿಧು ಅವರು ಮತ್ತೆ ಕ್ಯಾಪ್ಟನ್ ವಿರುದ್ಧ ಹೇಳಿಕೆ ನೀಡುವುದನ್ನು ಪುನರಾರಂಭಿಸುತ್ತಾರೆ' ಎಂದು ಚಡ್ಡಾ ತಿಳಿಸಿದ್ದಾರೆ.

ಕೇಂದ್ರದ ಕೃಷಿ ಕಾನೂನುಗಳಿಗೆ ಸಮ್ಮತಿ ಸೂಚಿಸುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ರೈತರ ಶೋಷಣೆ ನಡೆಸಲು ಮುಂದಾಗಿದ್ದಾರೆ ಎಂದು ಸಿಧು ಹೇಳಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು