ಬುಧವಾರ, ಮಾರ್ಚ್ 22, 2023
31 °C

ರಕ್ತದಾನ ಅಮೃತ ಮಹೋತ್ಸವಕ್ಕೆ ನೋಂದಣಿ ಆರಂಭ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ರಕ್ತದಾನ ಅಮೃತ ಮಹೋತ್ಸವ’ ಅಭಿಯಾನಕ್ಕಾಗಿ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಆರೋಗ್ಯ ಸೇತು ಆ್ಯಪ್‌ ಮೂಲಕ ಜನರು ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಸೆಪ್ಟೆಂಬರ್‌ 17ಕ್ಕೆ ಒಂದು ಲಕ್ಷ ಯುನಿಟ್‌ ರಕ್ತವನ್ನು ಸಂಗ್ರಹಿಸುವ ದೊಡ್ಡ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಅಂಗವಾಗಿ ಈ ಅಭಿಯಾನ ಕೈಗೊಳ್ಳಲಾಗಿದೆ. ಅಂದು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನವೂ ಆಗಿದೆ.

ಕೇಂದ್ರ ಆರೋಗ್ಯ ಸಚಿವಾಲಯವು ಈ ಸಂಬಂಧ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಮಂಗಳವಾರ ಪತ್ರ ಬರೆದಿದೆ. ಈ ಅಭಿಯಾನವು ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನ (ಅ.1) ವರೆಗೆ ಮುಂದುವರೆಯಲಿದೆ. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಲ್ಲಿನ ಸ್ಥಳೀಯ ಭಾಷೆಗಳಲ್ಲಿ ಅಭಿಯಾನದ ಕುರಿತು ಜಾಗೃತಿ ಮೂಡಿಸಬೇಕು ಎಂದೂ ಸಚಿವಾಲಯ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು