ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಾಟಿಕನ್‌ ಸಿಟಿ, ಮೆಕ್ಕಾ ರೀತಿ ರಾಮಜನ್ಮಭೂಮಿ ಅಭಿವೃದ್ಧಿ: ವಿಎಚ್‌ಪಿ ಅಧ್ಯಕ್ಷ

Last Updated 12 ಡಿಸೆಂಬರ್ 2021, 15:30 IST
ಅಕ್ಷರ ಗಾತ್ರ

ನಾಗ್ಪುರ: ಅಯೋಧ್ಯೆಯ ರಾಮಜನ್ಮಭೂಮಿ ತೀರ್ಥ ಕ್ಷೇತ್ರವನ್ನು ವ್ಯಾಟಿಕನ್ ಸಿಟಿ ಮತ್ತು ಮೆಕ್ಕಾ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಅಧ್ಯಕ್ಷ ರವೀಂದ್ರ ನರೈನ್ ಸಿಂಗ್ ಭಾನುವಾರ ಹೇಳಿದ್ದಾರೆ.

ಮಹಾರಾಷ್ಟ್ರದ ಧಂತೋಲಿ ಎಂಬಲ್ಲಿ ವಿಶ್ವ ಹಿಂದೂ ಜನಕಲ್ಯಾಣ ಪರಿಷತ್‌ನ ವಿದರ್ಭ ಪ್ರಾದೇಶಿಕ ಕಚೇರಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲೆಂದು ಸಿಂಗ್ ಭಾನುವಾರ ನಾಗ್ಪುರಕ್ಕೆ ಆಗಮಿಸಿದ್ದರು.

‘ಅಯೋಧ್ಯೆಯ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರವನ್ನು ವ್ಯಾಟಿಕನ್ ಸಿಟಿ (ರೋಮನ್ ಕ್ಯಾಥೋಲಿಕ್ ಚರ್ಚ್‌ನ ಪ್ರಧಾನ ಕಚೇರಿ) ಮತ್ತು ಮೆಕ್ಕಾ (ಇಸ್ಲಾಂನ ಪವಿತ್ರ ನಗರ) ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದು ಹಿಂದುತ್ವದ ಸಂಕೇತವಾಗಲಿದೆ’ ಎಂದು ಸಿಂಗ್ ಹೇಳಿದರು. ಸಂಘಟನೆಯ ಮುಖಂಡರು ಭಾಗವಹಿಸಿದ್ದ ಸಭೆಯಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರ್ಮಿಕ ಮತಾಂತರದ ಗುರಿಯನ್ನು ಹೊಂದಿರುವ ಸಂಘಟನೆಗಳಿಗೆ ಪೂರೈಕೆಯಾಗುತ್ತಿರುವ ವಿದೇಶಿ ದೇಣಿಗೆಗೆ ನರೇಂದ್ರ ಮೋದಿ ಸರ್ಕಾರವು ಕಡಿವಾಣ ಹಾಕಿದೆ ಎಂದು ರವೀಂದ್ರ ನರೈನ್‌ ಸಿಂಗ್‌ ಕೊಂಡಾಡಿದರು. ಅಲ್ಲದೆ, ರಾಷ್ಟ್ರ ನಿರ್ಮಾಣದಲ್ಲಿ ಹಿಂದೂಗಳೊಂದಿಗೆ ಕೈಜೋಡಿಸುವಂತೆ ಮುಸ್ಲಿಂ ಸಮುದಾಯಕ್ಕೆ ಮನವಿ ಮಾಡಿದರು.

‘ತಮಗೆ ಏನೂ ಆಗದು ಎಂದು ಹಿಂದೂಗಳು ಭಾವಿಸುತ್ತಾರೆ. ಈ ಮನಸ್ಥಿತಿಯಿಂದಾಗಿ ನಾವು ಸವಾಲುಗಳನ್ನು ಎದುರಿಸಬೇಕಾಗಿ ಬಂದಿದೆ’ ಎಂದು ಸಿಂಗ್ ಹೇಳಿದರು. ಕ್ರಿಶ್ಚಿಯನ್ ಮಿಷನರಿಗಳು ಧಾರ್ಮಿಕ ಮತಾಂತರಕ್ಕಾಗಿ ಬುಡಕಟ್ಟು ಪ್ರದೇಶಗಳಲ್ಲಿ ಆಸ್ಪತ್ರೆ ಮತ್ತು ಶಾಲೆಗಳನ್ನು ನಡೆಸುತ್ತಿವೆ,’ ಎಂದು ಅವರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT