ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘23ರ ಡಿಸೆಂಬರ್‌ಗೆ ರಾಮಮಂದಿರ ನಿರ್ಮಾಣ ಪೂರ್ಣ’

Last Updated 25 ಅಕ್ಟೋಬರ್ 2022, 12:27 IST
ಅಕ್ಷರ ಗಾತ್ರ

ಲಖನೌ: ರಾಮಮಂದಿರ ನಿರ್ಮಾಣದ ಪ್ರಗತಿ ಪರಿಶೀಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಯೋಧ್ಯೆಗೆ ಭೇಟಿ ನೀಡಿದ್ದ ಬೆನ್ನಲ್ಲೇ, ರಾಮಮಂದಿರ ನಿರ್ಮಾಣ ಕಾಮಗಾರಿ ಇನ್ನಷ್ಟು ಚುರುಕು ಪಡೆದುಕೊಂಡಿದೆ.

ನಿರ್ಮಾಣ ಕಾರ್ಯದ ಉಸ್ತುವಾರಿ ಹೊತ್ತಿರುವ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪದಾಧಿಕಾರಿಗಳ ಪ್ರಕಾರ, ನಿರ್ಮಾಣ ಕಾರ್ಯ 23ರ ಡಿಸೆಂಬರ್‌ಗೆ ಪೂರ್ಣಗೊಳ್ಳಲಿದೆ.

‘ನಿರ್ಮಾಣ ಕಾರ್ಯವನ್ನು 2023ರ ಡಿಸೆಂಬರ್‌ಗೆ ಪೂರ್ಣಗೊಳಿಸಿ ರಾಮಜನ್ಮಭೂಮಿ ಮಂದಿರ ನಿರ್ಮಾಣ ಸಮಿತಿಯ ಸುಪರ್ದಿಗೆ ಒಪ್ಪಿಸಬೇಕು ಎಂಬುದು ನಮ್ಮ ಗುರಿಯಾಗಿದೆ’ ಎಂದು ನಿರ್ಮಾಣದ ಗುತ್ತಿಗೆ ಪಡೆದಿರುವ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದರು.

ರಾಮಮಂದಿರದ ಪ್ರಮುಖ ಸಂಕೀರ್ಣದ ನಿರ್ಮಾಣ ಕಾರ್ಯ ಬಹುತೇಕ ಮುಗಿದಿದೆ. ಪ್ರಸ್ತುತ, ನೆಲಮಹಡಿಯಲ್ಲಿ ಕಲ್ಲು ಕೆತ್ತನೆ ಕಾಮಗಾರಿ ಪ್ರಗತಿಯಲ್ಲಿದೆ ಎಂದೂ ತಿಳಿಸಿದರು.

ಭಾನುವಾರ ಅಯೋಧ್ಯೆಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು, ನಿರ್ಮಾಣ ಕಾರ್ಯ ಕುರಿತಂತೆ ಎಂಜಿನಿಯರುಗಳು, ಕುಶಲಕರ್ಮಿಗಳ ಜೊತೆಗೆ ಸಮಾಲೋಚನೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT