ಬುಧವಾರ, ಅಕ್ಟೋಬರ್ 21, 2020
22 °C

ಉತ್ತರ ಪ್ರದೇಶದಲ್ಲಿ ‘ಜಂಗಲ್‌ ರಾಜ್‌’ ಸೃಷ್ಟಿಯಾಗಿದೆ: ಶಿವಸೇನಾ ಟೀಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಒಂದೆಡೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಇನ್ನೊಂದೆಡೆ ರಾಜ್ಯದಲ್ಲಿ ‘ಜಂಗಲ್‌ ರಾಜ್‌’ ಸೃಷ್ಟಿಯಾಗಿದೆ ಎಂದು ಶಿವಸೇನಾ ಟೀಕಿಸಿದೆ.

ಮಹಿಳೆಯರ ಮೇಲಾಗುತ್ತಿರುವ ಅತ್ಯಾಚಾರವನ್ನು ತಡೆಯುವಲ್ಲಿ ಕೇಂದ್ರಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರ ವಿಫಲವಾಗಿದೆ. ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಿದರು. ಆದರೆ ಅಲ್ಲಿ ಮಾತ್ರ ರಾಮ ರಾಜ್ಯವಿಲ್ಲ (ಉತ್ತಮ ಸರ್ಕಾರ). ಇಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇಲ್ಲವಾಗಿದೆ. ಜಂಗಲ್‌ ರಾಜ್‌ ನಿರ್ಮಾಣವಾಗಿದೆ ಎಂದು ಶಿವಸೇನೆಯ ಮುಖವಾಣಿ ‘ಸಾಮ್ನಾ’ ಪತ್ರಿಕೆಯ ಸಂಪಾದಕೀಯದಲ್ಲಿ ಹೇಳಲಾಗಿದೆ.

ಉತ್ತರ ಪ್ರದೇಶದಲ್ಲಿ ಮಹಿಳೆ ವಿರುದ್ಧ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಾಗಿವೆ. ಹಾಥರಸ್‌ನಲ್ಲಿ 19 ವರ್ಷದ ದಲಿತ ಯುವತಿ ಮೇಲೆ ನಡೆದ ಅತ್ಯಾಚಾರ ಘಟನೆಯು ದೇಶದಲ್ಲಿ ಸಂಚಲನ ಮೂಡಿಸಿದೆ. ಸಂತ್ರಸ್ತೆ ಸಾವಿಗೂ ಮುನ್ನ  ಅತ್ಯಾಚಾರಕ್ಕೊಳಗಾಗಿದ್ದೇನೆ ಎಂದು ಹೇಳಿಕೆ ನೀಡಿದ್ದರು. ಆದರೆ ಉತ್ತರ ಪ್ರದೇಶ ಸರ್ಕಾರ ಮಾತ್ರ ಆಕೆಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಹೇಳುತ್ತಿದೆ. ಈ ಘಟನೆ ನಡೆದ ಬೆನ್ನಲ್ಲೇ ಬಲರಾಮಪುರ ಜಿಲ್ಲೆಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಸಂಪಾದಕೀಯದಲ್ಲಿ ಹೇಳಲಾಗಿದೆ.

‘ಸಂತ್ರಸ್ತೆಗೆ ನ್ಯಾಯ ಒದಗಿಸುವ ಬದಲು ಆಕೆಯ ಮೇಲೆ ಅತ್ಯಾಚಾರವೇ ನಡೆದಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಒಂದು ವೇಳೆ ಯುವತಿ ಅತ್ಯಾಚಾರಕ್ಕೆ ಒಳಗಾಗಿಲ್ಲದಿದ್ದರೆ ರಾತ್ರೋರಾತ್ರಿ ಪೊಲೀಸರು ಏಕೆ ಆಕೆಯ ಅಂತ್ಯಕ್ರಿಯೆ ನಡೆಸಿದರು’ ಎಂದು ಶಿವಸೇನಾ ಪ್ರಶ್ನಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು