ಗುರುವಾರ , ಅಕ್ಟೋಬರ್ 21, 2021
29 °C

71ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ರಾಷ್ಟ್ರಪತಿ ಸೇರಿ ಗಣ್ಯರಿಂದ ಶುಭಾಶಯ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ 71ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಹುಟ್ಟುಹಬ್ಬದ ಅಂಗವಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಸೇರಿದಂತೆ ಹಲವು ಗಣ್ಯರು ಟ್ವಿಟರ್‌ನಲ್ಲಿ ಶುಭ ಹಾರೈಸಿದ್ದಾರೆ.

‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೇ, ನಿಮಗೆ ಜನ್ಮದಿನದ ಶುಭಾಶಯಗಳು. ನಾನು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಲಭಿಸಲೆಂದು ಬಯಸುತ್ತೇನೆ’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಟ್ವೀಟ್ ಮಾಡಿದ್ದಾರೆ.

‘ದೇಶದ ನೆಚ್ಚಿನ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರೇ,  ನಿಮಗೆ ಜನ್ಮದಿನದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ದೊರೆಯಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ. ಮೋದಿಯವರು ದೇಶವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವ ನಿಟ್ಟಿನಲ್ಲಿ ದೃಢ ಸಂಕಲ್ಪವನ್ನು ಹೊಂದಿದ್ದಾರೆ’ ಎಂದು ಗೃಹ ಸಚಿವ ಅಮಿತ್‌ ಶಾ ಟ್ವೀಟ್ ಮಾಡಿದ್ದಾರೆ.

‘ನರೇಂದ್ರ ಮೋದಿ ಅವರಿಗೆ 71 ನೇ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೇವರು ಉತ್ತಮ ಆರೋಗ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.

‘ಆದರಣೀಯ ಪ್ರಧಾನಿ ನರೇಂದ್ರ ಮೋದಿ  ಅವರಿಗೆ 71ನೇ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ಸದೃಢ, ಸಶಕ್ತ, ಸಮರ್ಥ ನವಭಾರತ ನಿರ್ಮಾಣದೆಡೆಗೆ ದೇಶವನ್ನು ಮುನ್ನಡೆಸುತ್ತಿರುವ ತಮಗೆ, ದೇವರು ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ತಮ್ಮ ನಾಯಕತ್ವಕ್ಕೆ ಮತ್ತಷ್ಟು ಶಕ್ತಿಯನ್ನು ಕರುಣಿಸಲಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು