ಮಹಾರಾಷ್ಟ್ರಕ್ಕೆ ಉದ್ಧವ್ ಠಾಕ್ರೆಯಿಂದ ಮುಕ್ತಿಸಿಗಲಿ ಎಂದು ರಾಣಾ ದಂಪತಿ ಪ್ರಾರ್ಥನೆ
ನವದೆಹಲಿ (ಪಿಟಿಐ): ‘ಮಹಾರಾಷ್ಟ್ರಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯಿಂದ ಮುಕ್ತಿ ಸಿಗಲಿ’ ಎಂದು ಪಕ್ಷೇತರ ಸಂಸದೆ ನವನೀತ್ ರಾಣಾ ಮತ್ತು ಶಾಸಕ ರವಿ ರಾಣಾ ಅವರು ಶನಿವಾರ ಇಲ್ಲಿನ ಹನುಮಾನ್ ಮಂದಿರದಲ್ಲಿ ಹನುಮಾನ್ ಚಾಲೀಸಾ ಪಠಿಸಿದರು.
ದೆಹಲಿಯ ಕನ್ನಾಟ್ ಪ್ರದೇಶದಲ್ಲಿರುವ ಹನುಮಾನ್ ದೇವಸ್ಥಾನಕ್ಕೆ ನವನೀತ್ ರಾಣಾ ಮತ್ತು ಅವರ ಪತಿ, ಶಾಸಕ ರವಿ ರಾಣಾ ಭಾರಿ ಸಂಖ್ಯೆಯ ಬೆಂಬಲಿಗರೊಂದಿಗೆ ಬಂದಿದ್ದರು. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಂದ ಮಹಾರಾಷ್ಟ್ರಕ್ಕೆ ದೊಡ್ಡ ಅಪಾಯ ಇದೆ. ರಾಜ್ಯವನ್ನು ಅವರಿಂದ ಮುಕ್ತಗೊಳಿಸುವಂತೆ ಪ್ರಾರ್ಥನೆ ಸಲ್ಲಿಸಿದ್ದಾಗಿ ನವನೀತ್ ರಾಣಾ ದೇವಸ್ಥಾನದ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.
ಉದ್ಧವ್ ಠಾಕ್ರೆಯವರ ಮುಂಬೈ ನಿವಾಸದ ಹೊರಗೆ ಹನುಮಾನ್ ಚಾಲೀಸಾ ಪಠಿಸುವಂತೆ ಕರೆ ನೀಡಿದ ಹಿನ್ನಲೆಯಲ್ಲಿ ಕಳೆದ ತಿಂಗಳು ದೇಶದ ದ್ರೋಹದ ಆರೋಪದ ಮೇಲೆ ರಾಣಾ ದಂಪತಿಯನ್ನು ಬಂಧಿಸಲಾಗಿತ್ತು. 12 ದಿನಗಳ ನಂತರ ಜಾಮೀನಿನ ಮೇಲೆ ಅವರು ಹೊರಬಂದಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.