ಸೋಮವಾರ, ಜೂನ್ 14, 2021
26 °C

ಪುದಚೇರಿ: ನಾಳೆ ರಂಗಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುದುಚೇರಿ: ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ನೂತನ ಮುಖ್ಯಮಂತ್ರಿಯಾಗಿ ಆಲ್‌ ಇಂಡಿಯಾ ಎನ್‌.ಆರ್‌. ಕಾಂಗ್ರೆಸ್‌ ಮುಖ್ಯಸ್ಥ ಎನ್‌. ರಂಗಸ್ವಾಮಿ ಶುಕ್ರವಾರ (ಮೇ 7) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ಸರಳ ಸಮಾರಂಭದಲ್ಲಿ ಪ್ರಮಾಣವಚನ ಬೋಧಿಸಲಿದ್ದಾರೆ.  ಅಂದು ರಂಗಸ್ವಾಮಿ ಮಾತ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಬಿಜೆಪಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು, ನವಶಿವಯಂ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮೇ 10ರ ಬಳಿಕ ಸಚಿವ ಸಂಪುಟ ರಚನೆಯಾಗಲಿದೆ ಎನ್ನಲಾಗಿದೆ.  ಆಲ್‌ ಇಂಡಿಯಾ ಎನ್‌.ಆರ್‌.ಕಾಂಗ್ರೆಸ್‌ ಮತ್ತು ಬಿಜೆಪಿ ಮೈತ್ರಿಕೂಟ ಪುದಚೇರಿಯಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು