ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ 20: ಗುಜರಾತ್‌ನಲ್ಲಿ ಟಿಡಬ್ಲ್ಯುಜಿ ಸಭೆ

Last Updated 3 ಫೆಬ್ರುವರಿ 2023, 14:45 IST
ಅಕ್ಷರ ಗಾತ್ರ

ಅಹಮದಾಬಾದ್‌: ಭಾರತವು ಜಿ 20 ಶೃಂಗಸಭೆಯ ಅಧ್ಯಕ್ಷತೆ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಟೂರಿಸಂ ವರ್ಕಿಂಗ್‌ ಗ್ರೂಪ್‌ನ (ಟಿಡಬ್ಲ್ಯುಜಿ) ಸಭೆಯು ಗುಜರಾತಿನ ರಣ್‌ ಆಫ್‌ ಕಚ್ಚ್‌ನಲ್ಲಿ ಫೆ.7ರಿಂದ 9ವರೆಗೆ ನಡೆದಲಿದೆ.

ಫೆ.8ರಂದು ಗುಜರಾತ್‌ನ ಮುಖ್ಯಮಂತ್ರಿ ಭುಪೇಂದರ್‌ ಪಾಟೇಲ್‌ ಹಾಗೂ ಕೇಂದ್ರ ಮೀನುಗಾರಿಕೆ, ಹೈನುಗಾರಿಕೆ ಸಚಿವ ಪುರುಶೋತ್ತಮ್‌ ರುಪಾಲಾ ಅವರು ಟಿಡಬ್ಲ್ಯುಜಿ ಸಭೆಯನ್ನು ಉದ್ಘಾಟಿಸಲಿದ್ದಾರೆ.

ಉದ್ಘಾಟನೆಯ ಬಳಿಕ, ಹಸಿರು ಪ್ರವಾಸೋದ್ಯಮ, ಡಿಜಿಟಲೀಕರಣ, ಕೌಶಲ, ಪ್ರವಾಸೋದ್ಯಮದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಡೆಸ್ಟಿನೇಷನ್‌ ಮ್ಯಾನೇಜ್‌ಮೆಂಟ್‌ ವಿಷಯಗಳ ಕುರಿತು ಗೋಷ್ಠಿಗಳು ನಡೆಯಲಿವೆ. ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕೃಷ್ಣ ರೆಡ್ಡಿ ಅವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಫೆ.7ರಂದು ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸಭೆಗೆ ಭಾಗವಹಿಸಲಿರುವ ಇಂಡೊನೇಷ್ಯಾ, ಇಟಲಿ, ದಕ್ಷಿಣ ಆಫ್ರಿಕಾ, ಸ್ಪೇನ್‌, ಜಪಾನ್‌, ಸೌದಿ ಅರೇಬಿಯಾ ಹಾಗೂ ಅರ್ಜೆಂಟೀನಾದ ಅತಿಥಿಗಳು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಫೆ.9ರಂದು ಅತಿಥಿಗಳು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗಾಗಿ ಯೋಗ ಗೋಷ್ಠಿ ನಡೆಯಲಿದೆ. ನಂತರ ರಾಜ್ಯ ಹಲವು ಐತಿಹಾಸಿಕ, ಪ್ರಸಿದ್ಧ ಪ್ರವಾಸೋದ್ಯಮ ಸ್ಥಳಗಳಿಗೆ ಅತಿಥಿಗಳು ಭೇಟಿ ನೀಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT