ಅಮೇಥಿ(ಉತ್ತರ ಪ್ರದೇಶ): ರಾಮಗಂಜ್ ಪ್ರದೇಶದ ಹಳ್ಳಿಯೊಂದರಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ತಮ್ಮ ಮಗಳು ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಮಾರ್ಚ್ 21ರಂದು ಸಂಜೆ ಮನೆಯಿಂದ ಹೋಗಿದ್ದಳು. ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ವಾಹನದಲ್ಲಿ ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಮರುದಿನ ಬೆಳಗ್ಗೆ ಬಾಲಕಿ ಮನೆಗೆ ಹಿಂದಿರುಗಿದಾಗ ಈ ಬಗ್ಗೆ ತಾಯಿಗೆ ವಿಷಯ ತಿಳಿಸಿದ್ದಾಳೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ರಾಮ್‌ಗಂಜ್ ಠಾಣಾಧಿಕಾರಿ ಪಂಕಜ್ ದ್ವಿವೇದಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.