ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ ಸಚಿವರ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

Last Updated 8 ಮೇ 2022, 14:15 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಸ್ಥಳೀಯ ಪೊಲೀಸರುರಾಜಸ್ಥಾನ ಸಚಿವರ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣದ ದೂರನ್ನು ದಾಖಲಿಸಿದ್ದಾರೆ.

23 ವರ್ಷದ ಮಹಿಳೆ ರಾಜಸ್ಥಾನ ಸಚಿವರ ಪುತ್ರ ರೋಹಿತ್‌ ವಿರುದ್ಧ ದೂರು ನೀಡಿದ್ದಾರೆ. ದೆಹಲಿ ಪೊಲೀಸರು ರೋಹಿತ್‌ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

2021ರ ಜನವರಿಯಲ್ಲಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ದೂರಲಾಗಿದೆ. ನನ್ನ ಮೇಲೆ ಹಲವು ಸಲ ಅತ್ಯಾಚಾರ ಮಾಡಿದ್ದಾರೆ ಎಂದು ದೂರಿದ್ದಾರೆ.

ಕೆಲಸದ ಸಂದರ್ಶನ ನೆಪದಲ್ಲಿ ನನ್ನ ದೆಹಲಿಗೆ ಕರೆಸಿಕೊಂಡು ಅತ್ಯಾಚಾರ ಮಾಡಿದ್ದಾರೆ. ನನ್ನ ನಗ್ನ ಚಿತ್ರಗಳು ಹಾಗೂ ವಿಡಿಯೊಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ ಎಂದಿದ್ದಾರೆ.

ಮೊದಲ ಪತ್ನಿಗೆ ವಿಚ್ಛೇದನ ಕೊಟ್ಟು, ನನ್ನ ಮದುವೆಯಾಗುವುದಾಗಿ ರೋಹಿತ್‌ ಹೇಳಿದ್ದರು ಎಂದು ಯುವತಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT