ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದಲ್ಲಿ ಮಹಿಳೆ ಮೇಲೆ ಅತ್ಯಾಚಾರ

Last Updated 10 ಜನವರಿ 2023, 10:51 IST
ಅಕ್ಷರ ಗಾತ್ರ

ಶಾಮ್ಲಿ: ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಪಾಳು ಬಿದ್ದ ಕಟ್ಟಡದಲ್ಲಿ 32 ವರ್ಷದ ಮಹಿಳೆ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸೆಗಿದ್ದಾನೆ.

ಆರೋಪಿ ಜೊತೆ ಇನ್ನಿಬ್ಬರು ಕಾರಿನಲ್ಲಿ ಲಿಫ್ಟ್ ನೀಡುವುದಾಗಿ ಹೇಳಿ, ಸಂತ್ರಸ್ತೆ ಮತ್ತು ಇಬ್ಬರು ಮಕ್ಕಳನ್ನು ನಿರ್ಜನ ಪ್ರದೇಶಕ್ಕೆ ಕರೆ ತಂದಿದ್ದರು. ಮುಖ್ಯ ಆರೋಪಿಯನ್ನು ಮೊಹಮ್ಮದ್ ಶೆಹಜಾದ್ (25) ಎಂದು ಗುರುತಿಸಲಾಗಿದೆ.
ಶೆಹಜಾದ್ ಸಹಚರರು ಮಕ್ಕಳನ್ನು ಕಟ್ಟಡದ ಹೊರಗೆ ನಿಲ್ಲಿಸಿಕೊಂಡಿದ್ದರು. ಈ ವೇಳೆ ದಾರಿಹೋಕರು ಅನುಮಾನದಿಂದ ಪ್ರಶ್ನಿಸಿದ್ದರು, ಆಗ ಅಲ್ಲಿಂದ ಪರಾರಿಯಾಗಿದ್ದಾರೆ.

ಸಂತ್ರಸ್ತೆ ನೀಡಿದ್ದ ದೂರಿನ ಆಧಾರದ ಮೇಲೆ ’ಮೂವರ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು 120 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು ಅವರನ್ನು ಶೀಘ್ರವಾಗಿ ಬಂಧಿಸಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT