ತಂದೆಯಿಂದಲೇ ಅತ್ಯಾಚಾರ; ಆತ್ಮಹತ್ಯೆ ಮಾಡಿಕೊಂಡ 18 ವರ್ಷದ ಮಗಳು

ಬಾಂದಾ: ತಂದೆಯಿಂದಲೇ ಅತ್ಯಾಚಾರಕ್ಕೊಳಗಾದ 18 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾಂದಾದ ಮರ್ಕಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.
ಗುರುವಾರ ರಾತ್ರಿ ಆರೋಪಿ ತಂದೆ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಎಸ್‌ಪಿ ಲಕ್ಷ್ಮಿ ಮಿಶ್ರಾ ತಿಳಿಸಿದ್ದಾರೆ.
ಶುಕ್ರವಾರ ಸಂಸ್ತಸ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಬಳಿಕ ಆರೋಪಿಯನ್ನು ಬಂಧಿಸಲಾಗಿದೆ ಮತ್ತು ತನಿಖೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.