ಶನಿವಾರ, ಅಕ್ಟೋಬರ್ 16, 2021
22 °C

ಉತ್ತರ ಪ್ರದೇಶ: ಗರ್ಭಪಾತದ ವೇಳೆ ಅತ್ಯಾಚಾರ ಸಂತ್ರಸ್ತೆ ಸಾವು; ನಾಲ್ವರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಮಹೊಬಾ: ಆರು ತಿಂಗಳ ಹಿಂದೆ ಅತ್ಯಾಚಾರಕ್ಕೆ ಗುರಿಯಾಗಿದ್ದ 20 ವರ್ಷದ ದಲಿತ ಮಹಿಳೆ, ಗರ್ಭಪಾತ ನಡೆಸುವ ವೇಳೆ ಮೃತಪಟ್ಟಿದ್ದಾರೆ. ಅತ್ಯಾಚಾರ ಆರೋಪಿ, ಆತನ ತಂದೆ, ಚಿಕ್ಕಪ್ಪ ಮತ್ತು ಖಾಸಗಿ ಆಸ್ಪತ್ರೆ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುವಾಗ ಆರು ತಿಂಗಳ ಹಿಂದೆ ಅತ್ಯಾಚಾರ ಎಸಗಲಾಗಿತ್ತು. ಈ ಬಗ್ಗೆ ದೂರು ನೀಡಿರಲಿಲ್ಲ. ರಕ್ತಸ್ರಾವದ ಬಳಿಕ ಸೆ.25ರಂದು ಆಸ್ಪತ್ರೆಗೆ ಕರೆತಂದಾಗ ಆಕೆ ಗರ್ಭವತಿ ಎಂಬುದು ಸಂಬಂಧಿಕರಿಗೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತೀವ್ರ ರಕ್ತಸ್ರಾವದಿಂದ ಮಹಿಳೆಯು ಆಸ್ಪತ್ರೆಯಲ್ಲಿ ಮೃತಪಟ್ಟರು. ಬುಧವಾರ ಅತ್ಯಾಚಾರ ಸಂಬಂಧ ಶೈಲೇಂದ್ರ ಸಿಂಗ್‌ ಎಂಬಾತನ ಮೇಲೆ ಎಫ್‌ಐಆರ್ ದಾಖಲಾಗಿದೆ. ಗರ್ಭಪಾತಕ್ಕೆ ಒತ್ತಡ ಹೇರಿದ್ದ ಆತನ ತಂದೆ, ಚಿಕ್ಕಪ್ಪನ ವಿರುದ್ಧ ಹಾಗೂ ಗರ್ಭಪಾತ ಚಿಕಿತ್ಸೆ ನಡೆಸಿದ ಆರೋಪದಡಿ ವೈದ್ಯನ ವಿರುದ್ಧ ಪ್ರಕರಣ ದಾಖಲಾಗಿದೆ. ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು