ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಭವನ: ಆಗಸ್ಟ್ 1ರಿಂದ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ

Last Updated 23 ಜುಲೈ 2021, 15:42 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ಭವನ ಮತ್ತು ಅಲ್ಲಿನ ಮ್ಯೂಸಿಯಂ ಸಂಕೀರ್ಣಕ್ಕೆ ಆಗಸ್ಟ್‌ 1ರಿಂದ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಶುಕ್ರವಾರ ಭವನದ ಪ್ರಕಟಣೆ ತಿಳಿಸಿದೆ.

ಕೋವಿಡ್‌ ಪಿಡುಗು ವ್ಯಾಪಕವಾಗುತ್ತಿದ್ದ ಕಾರಣ ಏಪ್ರಿಲ್‌ 14ರಿಂದ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು.

ರಾಷ್ಟ್ರಪತಿ ಭವನಕ್ಕೆ ಶನಿವಾರ ಮತ್ತು ಭಾನುವಾರ (ಗೆಜೆಟೆಡ್‌ ರಜಾದಿನಗಳನ್ನು ಹೊರತುಪಡಿಸಿ) ಮೂರು ಪೂರ್ವ ನಿಗದಿತ ಸ್ಲಾಟ್‌ಗಳಲ್ಲಿ ಪ್ರವೇಶಕ್ಕೆ ಅವಕಾಶವಿರುತ್ತದೆ. ರಾಷ್ಟ್ರಪತಿ ಭವನದ ಮ್ಯೂಸಿಯಂ ಸಂಕೀರ್ಣವು ಗೆಜೆಟೆಡ್ ರಜಾದಿನಗಳನ್ನು ಹೊರತುಪಡಿಸಿ ವಾರದಲ್ಲಿ ಆರು ದಿನಗಳವರೆಗೆ (ಮಂಗಳವಾರದಿಂದ ಭಾನುವಾರದವರೆಗೆ) ತೆರೆದಿರುತ್ತದೆ.

ಸಂದರ್ಶಕರು https://presidentofindia.nic.in ಅಥವಾ https://rashtrapatisachivalaya.gov.in/ ಅಥವಾ https://rbmuseum.gov.in/ ವೆಬ್‌ಸೈಟ್‌ಗೆ ಭೇಟಿ ನೀಡಿ, ಆನ್‌ಲೈನ್‌ ಮೂಲಕ ತಮ್ಮ ಸ್ಲಾಟ್‌ಗಳನ್ನು ಕಾಯ್ದಿರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT