ಬುಧವಾರ, ಆಗಸ್ಟ್ 10, 2022
23 °C

ನೂತನ ಸಂಸತ್‌ ಭವನ ನಿರ್ಮಾಣ ಯೋಜನೆಗೆ ಶುಭ ಹಾರೈಸಿದ ರತನ್‌ ಟಾಟಾ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ನೂತನ ಸಂಸತ್‌ ಭವನ ನಿರ್ಮಾಣವು ಮಹತ್ವದ ಯೋಜನೆಯಾಗಿದ್ದು, ಇದು ಎಲ್ಲ ರೀತಿಯ ಯಶಸ್ಸು ಕಾಣಲಿ ಎಂದು ಟಾಟಾ ಟ್ರಸ್ಟ್‌ ಅಧ್ಯಕ್ಷ ರತನ್‌ ಟಾಟಾ ಶುಭ ಹಾರೈಸಿದ್ದಾರೆ.

ಸಂಸತ್‌ನ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಪ್ರತಿಕ್ರಿಯಿಸಿರುವ ಅವರು, 'ಇದೊಂದು ಮಹತ್ವದ ಯೋಜನೆಯಾಗಿದ್ದು, ಎಲ್ಲ ರೀತಿಯ ಯಶಸ್ಸು ಕಾಣಲಿ' ಎಂದು ಹೇಳಿದ್ದಾರೆ.

ಶಂಕುಸ್ಥಾಪನಾ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ರತನ್‌ ಟಾಟಾ ಸಂತಸ ವ್ಯಕ್ತಪಡಿಸಿದ್ದಾರೆ.

ಹೊಸ ಸಂಸತ್ ಭವನ ಕಟ್ಟಡದ ನಿರ್ಮಾಣ ಯೋಜನೆಗೆ ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್‌ಗೆ ಗುತ್ತಿಗೆ ನೀಡಲಾಗಿದೆ.

ಸಂಸತ್‌ನ ನೂತನ ಕಟ್ಟಡಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.

ಸಂಪುಟದ ಸಚಿವರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಹಲವು ದೇಶಗಳ ರಾಯಭಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು