ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸಗೊಬ್ಬರ ಹಗರಣ: ರತುಲ್ ಪುರಿಗೆ ದೆಹಲಿ ಕೋರ್ಟ್ ಸಮನ್ಸ್‌

Last Updated 23 ಡಿಸೆಂಬರ್ 2022, 17:02 IST
ಅಕ್ಷರ ಗಾತ್ರ

ನವದೆಹಲಿ: ರಸಗೊಬ್ಬರ ಹಗರಣ ಮತ್ತು ₹ 685 ಕೋಟಿ ಲಂಚ ಪಡೆದ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಅವರ ಸೋದರಳಿಯ ರತುಲ್ ಪುರಿ ಅವರಿಗೆ ದೆಹಲಿ ನ್ಯಾಯಾಲಯವು ಶುಕ್ರವಾರ ಸಮನ್ಸ್ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್‌ಶೀಟ್ ಅನ್ನು ಗಮನದಲ್ಲಿಟ್ಟುಕೊಂಡುವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು ಜನವರಿ 18ಕ್ಕೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಪುರಿ ಅವರಿಗೆ ಸೂಚಿಸಿದ್ದಾರೆ.

ಪ್ರಕರಣದಲ್ಲಿ ಪುರಿ ಅವರನ್ನು ವಿಚಾರಣೆಗೆ ಒಳಪಡಿಸಲು ಪ್ರಾಥಮಿಕವಾಗಿ ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಜಾರಿನಿರ್ದೇಶನಾಲಯದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನಿತೇಶ್ ರಾಣಾ ಅವರ ಸಲ್ಲಿಕೆಗಳನ್ನು ಗಮನಿಸಿ, ನ್ಯಾಯಾಧೀಶರು ಸಮನ್ಸ್ ನೀಡಿದ್ದಾರೆ.

ಪುರಿ ಅವರು ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ ಮತ್ತು ಮೋಸರ್ ಬೇರ್ ಹಗರಣದಲ್ಲೂ ಆರೋಪಿಯಾಗಿದ್ದಾರೆ. ಈ ಎರಡೂ ಹಗರಣಗಳಿಗೆ ಸಂಬಂಧಿಸಿದಂತೆ ಪುರಿ ಅವರು ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT