ಶುಕ್ರವಾರ, ನವೆಂಬರ್ 27, 2020
19 °C

ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್‌ಗೆ ಕೋವಿಡ್‌ ದೃಢ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಭಾನುವಾರ ಕೋವಿಡ್‌ ಸೋಂಕು ದೃಢಪಟ್ಟಿದೆ.

ನನಗೆ ಕೋವಿಡ್‌–19 ಸೋಂಕು ಭಾನುವಾರ ದೃಢಪಟ್ಟಿದ್ದು ನಾನು ಆರೋಗ್ಯವಾಗಿದ್ದೇನೆ ಎಂದು ಶಕ್ತಿಕಾಂತ ದಾಸ್ ಟ್ವೀಟ್‌ ಮಾಡಿದ್ದಾರೆ.

ಹೋಮ್‌ ಕ್ವಾರಂಟೈನ್‌ ಮೂಲಕ ಕಚೇರಿ ಕೆಲಸಗಳನ್ನು ಮುಂದುವರೆಸಿವೆ. ದೂರವಾಣಿ ಹಾಗೂ ವಿಡಿಯೊ ಕಾಲಿಂಗ್‌ ಮೂಲಕ ಅಧಿಕಾರಿಗಳ ಸಂಪರ್ಕದಲ್ಲಿ ಇದ್ದೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನನ್ನ ಸಂಪರ್ಕಕಕ್ಕೆ ಬಂದವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವಂತೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. 

ಭಾರತದಲ್ಲಿಕಳೆದ  24 ಗಂಟೆಗಳ ಅವಧಿಯಲ್ಲಿ 55,000 ಹೊಸ ಪ್ರಕರಣಗಳು ದಾಖಲಾಗಿದ್ದು ಒಂದೇ ದಿನ 578
ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು