ಶನಿವಾರ, ಆಗಸ್ಟ್ 20, 2022
21 °C

ರೆಪೊ ದರ: ಯಥಾಸ್ಥಿತಿಗೆ ಆರ್‌ಬಿಐ ನಿರ್ಧಾರ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಹಣದುಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಆರ್‌ಬಿಐ ನಿರ್ಧರಿಸಿದೆ. ಈ ದರವನ್ನು ಶೇ 4ರಷ್ಟೇ ಕಾಯ್ದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ಶುಕ್ರವಾರ ಹೇಳಿದ್ದಾರೆ. 

ಮಾನಿಟರಿ ಪಾಲಿಸಿ ಕಮಿಟಿ (ಎಂಪಿಸಿ) ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಕುರಿತು ಮಾಹಿತಿ ನೀಡಿದ ಅವರು, ಕೋವಿಡ್‌–19ನಿಂದಾಗಿ ಕುಸಿದಿರುವ ದೇಶದ ಆರ್ಥಿಕತೆಗೆ ಪುನಶ್ಚೇತನ ನೀಡಲು ಮುಂಬರುವ ದಿನಗಳಲ್ಲಿ ಮತ್ತಷ್ಟು ದರ ಕಡಿತ ಮಾಡಲು ಸಿದ್ಧ ಎಂಬ ಮುನ್ಸೂಚನೆಯನ್ನೂ ನೀಡಿದರು.

ಸತತ ಮೂರನೇ ಬಾರಿ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಅಲ್ಲದೇ, ಆರ್ಥಿಕತೆಗೆ ಉತ್ತೇಜನ ನೀಡುವ ಸಲುವಾಗಿ ಕಳೆದ ಮಾರ್ಚ್‌ನಿಂದ ಈ ವರೆಗೆ ಆರ್‌ಬಿಐ ರೆಪೊ ದರದಲ್ಲಿ 115 ಅಂಶಗಳನ್ನು ಕಡಿತಗೊಳಿಸಿದಂತಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು